ಮುಂದಿನ ಬಜೆಟ್ ನಲ್ಲಿ ನೀರಾವರಿ ಯೋಜನೆಗೆ ಆದ್ಯತೆ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ಮಂದಿನ ಸಾಲಿನ ಬಜೆಟ್ ಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರೈತರ ಹಿತ ಕಾಯುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೂ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಹೇಳಿದ್ದಾರೆ.

Published: 05th January 2020 12:53 PM  |   Last Updated: 05th January 2020 12:53 PM   |  A+A-


Yediyurappa

ಯಡಿಯೂರಪ್ಪ

Posted By : Manjula VN
Source : UNI

ಹಾಸನ:  ಮಂದಿನ ಸಾಲಿನ ಬಜೆಟ್ ಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರೈತರ ಹಿತ ಕಾಯುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೂ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಹೇಳಿದ್ದಾರೆ.

ಹಾಸನದ ಹಳೆಬೀಡಿನ ಪುಷ್ಪಗಿರಿ ಉತ್ಸವಕ್ಕೆ ಆಗಮಿಸಿದ ವೇಳೆ ಮಾರಗೊಂಡನಹಳ್ಳಿಯ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಅವರು, ರೈತರ ಉತ್ಪನ್ನಗಳು ಹೆಚ್ಚಾಗಬೇಕು. ಅದಕ್ಕೆ ಬೆಂಬಲ ಸಿಗುವಂತಹ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.

ಬಜೆಟ್ ನಲ್ಲಿ ಹೊಸ ಅಂಶಗಳನ್ನು ಸೇರಿಸುವ ಕುರಿತಂತೆ ಮುಂದಿನ ದಿನಗಳಲ್ಲಿ ಸಭೆಗಳನ್ನು ನಡೆಸಿ ಎಲ್ಲರ ಅಭಿಪ್ರಾಯಗಳನ್ನು ಒಗ್ಗೂಡಿಸಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರ ಎಲ್ಲರ ಅಭಿಪ್ರಾಯ ಪಡೆದು ನಂತರ ವರಿಷ್ಠರ ನಿರ್ಧಾರದಂತೆ ಕ್ರಮಕೈಗೊಳ್ಳಲಾಗುವುದು. ಪ್ರಧಾನಿಯವರು ರಾಜ್ಯಕ್ಕೆ ಆಗಮಿಸಿದಾಗ ಅವರಿಗೆ ರೈತರ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ಪ್ರವಾಹ ಸಂತ್ತಸ್ತರಿಗೆ ಪರಿಹಾರ ನೀಡಲು ಅನುದಾನವನ್ನು ಕೂಡ ಬಿಡುಗಡೆ ಮಾಡಲು ಈಗಾಗಲೇ ಮನವಿ ಸಲ್ಲಿಸಿದ್ದೇನೆ. ಎಲ್ಲವನ್ನು ಪ್ರಧಾನಿಯವರು ಗಮನಿಸಲಿದ್ದಾರೆ ಎಂದು ಮುಖ್ಯ ಮಂತ್ರಿ ಅವರು ಹೇಳಿದರು.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp