ಸಿಎಎ ವಿಚಾರದಲ್ಲಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ- ಉಕ್ಕಿನ ಮಹಿಳೆ ಶರ್ಮಿಳಾ

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ದೇಶದ ಜನರ ಅಭಿಪ್ರಾಯಗಳನ್ನು ನಿರ್ಲಕ್ಷಿಸಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಶರ್ಮಿಳಾ ಆರೋಪಿಸಿದ್ದಾರೆ.
ಹೋರಾಟಗಾರ್ತಿ ಶರ್ಮಿಳಾ
ಹೋರಾಟಗಾರ್ತಿ ಶರ್ಮಿಳಾ

ಬೆಂಗಳೂರು:  ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ದೇಶದ ಜನರ ಅಭಿಪ್ರಾಯಗಳನ್ನು ನಿರ್ಲಕ್ಷಿಸಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಶರ್ಮಿಳಾ ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ, ಎನ್ ಆರ್ ಸಿ ಹಾಗೂ ಎನ್ ಪಿಆರ್ ವಿರೋಧಿಸಿ ಟೌನ್ ಹಾಲ್ ಮುಂಭಾಗ ನಡೆದ ಬುರ್ಕಾ ಮತ್ತು ಬಿಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಡಳಿತ ನಡೆಸುವವರಿಗೆ ದೇಶದ ಬಗ್ಗೆ ದೂರದೃಷ್ಟಿ ಹೊಂದಿಲ್ಲ. ಜನರು ಪಾಲ್ಗೊಳ್ಳದೆ ಏಕ ಪಕ್ಷೀಯ ಆಡಳಿತ ನಡೆಸಲಾಗುತ್ತಿದೆ ಎಂದು ಟೀಕಿಸಿದರು.

ವೈವಿಧ್ಯೆತೆಯಲ್ಲಿ ಏಕತೆಗೆ ಹೆಸರಾಗಿರುವ ಭಾರತ ರಾಷ್ಟ್ರಗಳ ರಾಷ್ಟ್ರವಾಗಿದೆ. ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ಈ ಹಿಂದೆ ಹಿಂದಿ ಭಾಷೆ ಹೇರಲು ಪ್ರಯತ್ನಿಸಿದ ಸರ್ಕಾರ ಇದೀಗ ಎನ್ ಆರ್ ಸಿಯನ್ನು ಜಾರಿಗೆ ತರಲು ಮುಂದಾಗಿದೆ.ವಿವಾದಾತ್ಮಕ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಜನರ ಹೋರಾಟ ಮುಂದುವರೆಯಲಿದೆ ಎಂದು ಅವರು ಹೇಳಿದರು. 

ಪೌರತ್ವ ತಿದ್ದುಪಡಿ ಕಾಯ್ದೆಯಂತಹ ಕಾನೂನು ಜಾರಿಗೆ ತರುವ ಮೂಲಕ ಜನರನ್ನು ವಿಭಜಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com