ಕದ್ರಿ ದೇವಾಲಯದ ಕೊಳದಲ್ಲಿ ಮುಳುಗಿ ಬಾಲಕ ಸಾವು

ಕದ್ರಿ ದೇವಾಲಯದ ಕೊಳದಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಹತ್ತು ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾನೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಕದ್ರಿ ದೇವಾಲಯದ ಕೊಳದಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಹತ್ತು ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾನೆ.

ಮೃತನನ್ನು ಅಥಣಿ ತಾಲ್ಲೂಕು ನಿವಾಸಿ ಸಂದೇಶ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಸಂಜೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಕೊಳದಲ್ಲಿ ಸ್ನಾನ ಮಾಡುವಾಗ ಸಂದೇಶ್ ಮುಳುಗಿದ್ದಾನೆ. ಅವರನ್ನು ತಕ್ಷಣ ನಗರದ ಆಸ್ಪತ್ರೆಗೆ ಸಾಗಿಸಲಾಯಿತು, ಆದಾಗ್ಯೂ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾನೆ.

ಸೈನಿಕ ಶಾಲೆ ಪ್ರವೇಶ ಪರೀಕ್ಷೆ ಬರೆಯುವುದಕ್ಕಾಗಿ ಅಥಣಿಯ 60 ಮಕ್ಕಳು ಮಂಗಳೂರಿಗೆ ಬಂದಿದ್ದರು. ಈ 60 ಜನ ಮಕ್ಕಳ ಜತೆ 5 ಮಂದಿ ಶಿಕ್ಷಕರು ಮಂಗಳೂರಿಗೆ ಬಂದಿದ್ದರು. ಪರೀಕ್ಷೆ ಮುಗಿದ ಬಳಿಕ ಸಂಜೆ ವೇಳೆಗೆ ಈ ಎಲ್ಲಾ ಮಕ್ಕಳು ಕದ್ರಿ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿನ ಕೋಳವನ್ನು ನೋಡಿ ಸ್ನಾನ ಮಾಡುವುದಕ್ಕಾಗಿ ಮಕ್ಕಳು ಇಳಿದಿದ್ದರು. ಸ್ನಾನ ಮಾಡುತ್ತಿದ್ದಂತೆ ಸಂದೇಶ್‌ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದನು. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಾಲಕ ಸಂದೇಶ್‌ ಅಥಣಿ ತಾಲೂಕಿನ ಶ್ರೀಪತಿ ಶಿಂಧೆ ಮತ್ತು ರಾಜಶ್ರೀ ದಂಪತಿಯ ಪುತ್ರನಾಗಿದ್ದಾನೆ. ತಂದೆ ಶ್ರೀಪತಿ ಶಿಂಧೆ ಭೂ ಸೇನೆಯಲ್ಲಿದ್ದು, ಪ್ರಸ್ತುತ ಅರುಣಾಚಲ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ರನನ್ನು ಕೂಡಾ ಸೇನೆಗೆ ಸೇರ್ಪಡೆ ಮಾಡುವ ಕನಸಿನೊಂದಿಗೆ ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿಸಬೇಕೆಂದುಕೊಂಡಿದ್ದರು. ಈ ನಿಟ್ಟಿನಲ್ಲಿ ಕೋಚಿಂಗ್‌ ಕ್ಲಾಸ್‌ಗೆ ಸೇರಿಸಿದ್ದರು. ಹಾಗೆ ಕೋಚಿಂಗ್‌ ಪಡೆಯುತ್ತಿದ್ದಾಗಲೇ ಸೈನಿಕ ಶಾಲೆಯ ಪ್ರವೇಶ ಪರೀಕ್ಷೆ ಎದುರಾಗಿತ್ತು. ಪ್ರವೇಶ ಪರೀಕ್ಷೆ ಬರೆಯುವುದಕ್ಕಾಗಿ ಸಂದೇಶ್‌ ಸಹಿತ ಇತರ 60 ಜನ ಮಕ್ಕಳು ಮಂಗಳೂರಿಗೆ ಬಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com