ಕಲಬುರಗಿ: ಬ್ಯಾಂಕ್‌ ಮಹಿಳಾ ಉದ್ಯೋಗಿ ಆತ್ಮಹತ್ಯೆಗೆ ಶರಣು

ಬ್ಯಾಂಕ್ ನ ಮಹಿಳಾ ಉದ್ಯೋಗಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲಬುರಗಿ: ಬ್ಯಾಂಕ್ ನ ಮಹಿಳಾ ಉದ್ಯೋಗಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.

ತೆಲಂಗಾಣ ಮೂಲದ ಪ್ರಿಯಾಂಕಾ (25 ) ಎಂಬುವವರು ನಗರದ ಖಾಸಗಿ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಕಲಬುರಗಿಯ ಸಿಂಡಿಕೇಟ್ ಬ್ಯಾಂಕ್ ನ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ . 

ತಾವು ವಾಸಿಸುತ್ತಿದ್ದ ಪಿಜಿಯಲ್ಲಿಯೇ ಪ್ರಿಯಾಂಕಾ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಘಟನೆಗೆ ಕಾರಣ ತಿಳಿದು ಬಂದಿಲ್ಲ.  ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com