ನೆರೆ ಪರಿಹಾರ ಕಾರ್ಯಗಳಿಗೆ 2ನೇ ಕಂತಿನಲ್ಲಿ ರೂ.669 ಕೋಟಿ ಬಿಡುಗಡೆ ಮಾಡಿದ ಕೇಂದ್ರ!

ಭೀಕರ ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ಎರಡನೇ ಕಂತಿನಲ್ಲಿ ರೂ.669 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಭೀಕರ ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ಎರಡನೇ ಕಂತಿನಲ್ಲಿ ರೂ.669 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. 

ಎರಡನೇ ಕಂತಿನಲ್ಲಿ ಈ ಹಿಂದೆ ರೂ.1869 ಕೋಟಿ ಬಿಡುಗೆಡೆ ಮಾಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಇದೀಗ ರೂ.669ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ ರೂ.1,200 ಕೋಟಿ ಬಿಡುಗಡೆ ಮಾಡಿತ್ತು. 

ಪ್ರವಾಹ ಪೀಡಿದ ಜಿಲ್ಲೆಗಳಲ್ಲಿ ಸಾಮಾನ್ಯ ಸ್ಥಿತಿ ಸ್ಥಾಪನೆಗೆ ಹೆಚ್ಚುವರಿಯಾಗಿ ಹಣ ಬಿಡುಗಡೆ ಮಾಡುವಂತೆ ಈ ಹಿಂದೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದ್ದು, ಈ ಮನವಿಗೆ ಸ್ಪಂದನೆ ನೀಡಿರುವ ಕೇಂದ್ರ ಇದೀಗ ಪರಿಹಾರ ಧನವನ್ನು ಬಿಡುಗೆಡ ಮಾಡಿದೆ ಎಂದು ಕಂದಾಯ ಆಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ನೆರೆ ಪರಿಹಾರದ ಕುರಿತು ವಿರೋಧ ಪಕ್ಷಗಳು ವ್ಯಂಗ್ಯವಾಡಿದೆ. 

ಕೇಂದ್ರ ಸರ್ಕಾರವು ಹೆಚ್ಚುವರಿ ನೆರೆ ಪರಿಹಾರ ನೀಡಿರುವುದು ಕೇವಲ ರೂ.669 ಕೋಟಿ ಮಾತ್ರ. ಆದರೆ, ಸುಳ್ಳು ದೇವರ ಭಕ್ತರಾದ ಬಿಜೆಪಿಯವರು ರೂ.1,869 ಕೋಟಿ ಹೆಚ್ಚುವರಿಯಾಗಿ ನೀಡಿದ್ದು, ಒಟ್ಟು ರೂ.3,069ಕೋಟಿ ಪರಿಹಾರ ನೀಡಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆಂದು ಹೇಳಿದೆ. 

ಅಲ್ಲದೆ, ರಾಜ್ಯ ಸರ್ಕಾರವು ರೂ.38 ಸಾವಿರ ಕೋಟಿ ಪರಿಹಾರ ಕೇಳಿದರೆ, ಒಟ್ಟು 1,869 ಕೋಟಿ ಮಾತ್ರ ನೀಡಿದ್ದಾರೆ. ಇದೂ ಕೂಡ ಆಗಸ್ಟ್ ತಿಂಗಳ ನೆರೆ ಹಾವಳಿಗೆ ನೀಡಿರುವ ಪರಿಹಾರ. ಅಕ್ಟೋಬರ್ ತಿಂಗಳ ಅತಿವೃಷ್ಟಿಯ ನಷ್ಟದ ಸಮೀಕ್ಷೆ ನಡೆಸಿ ಒಟ್ಟು ಪರಿಹಾರ ಕೇಳುವುದು ಯಾವಾಗ ಎಂದು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com