ಸಿಎಎ ಪರ ಸಹಿ ಸಂಗ್ರಹ ವೇಳೆ ಬಿಜೆಪಿ ಕಾರ್ಯಕರ್ತರ ಧಮ್ಕಿ, ಜ್ಯೋತಿ ನಿವಾಸ್ ಕಾಲೇಜು ವಿದ್ಯಾರ್ಥಿನಿಯರಿಂದ ಪ್ರತಿಭಟನೆ!

ಪೌರತ್ವ ತಿದ್ದುಪಡಿ ಕಾಯ್ದೆ ಪರ ಸಹಿ ಸಂಗ್ರಹಿಸುವ ವೇಳೆ ಬಿಜೆಪಿ ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿ ಕೋರಮಂಗಲದಲ್ಲಿರುವ ಜ್ಯೋತಿ ನಿವಾಸ್ ಮಹಿಳಾ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತರು
ಬಿಜೆಪಿ ಕಾರ್ಯಕರ್ತರು

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಪರ ಸಹಿ ಸಂಗ್ರಹಿಸುವ ವೇಳೆ ಬಿಜೆಪಿ ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿ ಕೋರಮಂಗಲದಲ್ಲಿರುವ ಜ್ಯೋತಿ ನಿವಾಸ್ ಮಹಿಳಾ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. 

ಕಾಲೇಜಿನ ಗೋಡೆಗಳ ಮೇಲೆ ಬಿಜೆಪಿ ಕಾರ್ಯಕರ್ತರು ಸಿಎಎ ಪರ ಬ್ಯಾನರ್ ಅಂಟಿಸಿ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಮಾಡುತ್ತಿದ್ದರು. ಈ ವೇಳೆ ಕೆಲ ವಿದ್ಯಾರ್ಥಿನಿಯರು ಕಾಲೇಜಿನ ಗೋಡೆಗಳ ಮೇಲೆ ಬ್ಯಾನರ್ ಅಂಟಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. 

ಈ ಬಗ್ಗೆ ಪ್ರಶ್ನಿಸಿದಾಗ ಬಿಜೆಪಿ ಕಾರ್ಯಕರ್ತರು ವಿದ್ಯಾರ್ಥಿನಿಗೆ ಧಮ್ಕಿ ಹಾಕಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಕಾಲೇಜಿನ ವಿದ್ಯಾರ್ಥಿನಿಯವರು ಈ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂತ್ ಅವರಿಗೆ ದೂರು ನೀಡಿದ್ದಾರೆ. 

ಬಿಜೆಪಿ ಕಾರ್ಯಕರ್ತರಿಂದ ಬೆದರಿಕೆಯಾಗಿದೆ ಎಂದು ಆಕ್ಷೇಪಿಸಿ ಜ್ಯೋತಿ ನಿವಾಸ್ ಕಾಲೇಜು ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲೇ ಪ್ರತಿಭಟನೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com