ಸಿಎಎ ಜಾಗೃತಿ: ಹುಬ್ಬಳ್ಳಿಯಲ್ಲಿ ಜನವರಿ 18 ರಂದು ಅಮಿತ್ ಶಾ ಬೃಹತ್ ರ್ಯಾಲಿ

ಪೌರತ್ವ ತಿದ್ದುಪಡಿ ಕಾಯ್ದೆಗೆ ಪ್ರಮುಖ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಇದೇ 18 ರಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಅಮಿತ್ ಶಾ ಬೃಹತ್‌ ರ್‍ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ಬೆಂಗಳೂರು:  ಪೌರತ್ವ ತಿದ್ದುಪಡಿ ಕಾಯ್ದೆಗೆ ಪ್ರಮುಖ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಇದೇ 18 ರಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಅಮಿತ್ ಶಾ ಬೃಹತ್‌ ರ್‍ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. 

ರಾಜ್ಯ ಬಿಜೆಪಿ ಈ ಸಂಬಂಧ ರಾಜ್ಯದ ವಿವಿಧೆಡೆ ಸರಣಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಗುರುವಾರದಿಂದ(ಜ.9) ಈ ಕಾರ್ಯಕ್ರಮ ಆರಂಭಗೊಂಡು ಜ.18ರವರೆಗೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲು ಬಿಜೆಪಿ “ಮನೆ ಮನೆ ಸಂಪರ್ಕ’ ಅಭಿಯಾನಕ್ಕೆ ಚಾಲನೆ ನೀಡಿದ್ದು, ಈ ಅವಧಿಯಲ್ಲಿ 4.65 ಲಕ್ಷ ಮನೆಗಳಿಗೆ ಯಶಸ್ವಿಯಾಗಿ ಮಾಹಿತಿಯನ್ನು ತಲುಪಿಸಲಾಗುವುದು. ಜ.11 ಹಾಗೂ 12ರಂದು ಎರಡೂ ದಿನ ಪೂರ್ಣ ಪ್ರಮಾಣದಲ್ಲಿ ಬೂತ್‌ ಮಟ್ಟದಲ್ಲಿ ಮನೆ, ಮನೆ ಸಂಪರ್ಕ ಅಭಿಯಾನ ನಡೆಸಿ, ಎಲ್ಲರಿಗೂ ಮಾಹಿತಿ ತಲುಪಿಸಲು ಬಿಜೆಪಿ ಕರೆ ನೀಡಿದೆ.

ಕಾಯ್ದೆ ಕುರಿತು ಜನಜಾಗೃತಿ ಅಭಿಯಾನಕ್ಕೆ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷರು ಚಾಲನೆ ನೀಡಿದ್ದು, ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಳ್ಳಾರಿ, ರಾಮನಗರ, ಕೋಲಾರ, ದೊಡ್ಡಬಳ್ಳಾಪುರ, ತುಮಕೂರು, ಕಾರ್ಕಳ, ಮಾಲೂರು, ಚಿಂತಾಮಣಿಗಳಲ್ಲಿ ಯಶಸ್ವಿಯಾಗಿ ರ್ಯಾಲಿಗಳು ನಡೆದಿವೆ ಎಂದು ಹೇಳಿದರು.

ಅದೇ ರೀತಿ ಜ.9, 11, 12, 13ರಂದು ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಪಾಲ್ಗೊಳ್ಳಲಿ ದ್ದಾರೆ ಎಂದು ತಿಳಿಸಿದರು.

ಜಾಗೃತಿ ಅಭಿಯಾನದ ರಾಜ್ಯ ಸಂಚಾಲಕ ಎನ್‌.ರವಿಕುಮಾರ್‌ ಮಾತನಾಡಿ, ಸಿಎಎ ಕುರಿತು ಕಾಂಗ್ರೆಸ್‌, ಕಮ್ಯುನಿಸ್ಟರು, ಕೆಲ ಬುದ್ಧಿಜೀವಿಗಳು ಅಪಪ್ರಚಾರ ನಡೆಸಿ, ಅಲ್ಪಸಂಖ್ಯಾ ತರನ್ನು ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡಿದರು. ಆದರೆ, ಕಾಂಗ್ರೆಸ್‌ನ ಪಿತೂರಿ, ಕಮ್ಯುನಿಸ್ಟರ ಷಡ್ಯಂತ್ರ, ಬುದ್ಧಿ ಜೀವಿಗಳ ಕುತಂತ್ರವನ್ನು ಬಿಜೆಪಿ ಬಯಲಿಗೆಳೆಯಿತು. ಸಿಎಎ ದೇಶದ 130 ಕೋಟಿ ಜನರ ಸಮ್ಮತ ಕಾಯ್ದೆ ಎಂದು ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com