'ಸಪ್ತಪದಿ' ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ

ದುಂದುವೆಚ್ಚಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಲಾಂಛನ ಹಾಗೂ ಕರಪತ್ರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬಿಡುಗಡೆಗೊಳಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

Published: 10th January 2020 04:13 PM  |   Last Updated: 10th January 2020 04:13 PM   |  A+A-


BSYediyurappa1

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Posted By : Nagaraja AB
Source : ANI

ಬೆಂಗಳೂರು: ದುಂದುವೆಚ್ಚಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಲಾಂಛನ ಹಾಗೂ ಕರಪತ್ರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬಿಡುಗಡೆಗೊಳಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಈ ಯೋಜನೆಯಡಿ ವಿವಾಹವಾಗುವ ವಧುವಿಗೆ ಸರ್ಕಾರದಿಂದ 10  ಸಾವಿರ ರೂ. ಪ್ರೋತ್ಸಾಹ ಧನ ಹಾಗೂ ಮಂಗಳಸೂತ್ರಕ್ಕಾಗಿ 40 ಸಾವಿರ ರೂಪಾಯಿ ನೀಡಲಾಗುತ್ತದೆ. ವರನಿಗೆ  5 ಸಾವಿರ ರೂಪಾಯಿ ನೀಡಲಾಗುವುದು. ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿರುವ ದೇವಾಲಯಗಳ ಕಿರುಪಟ್ಟಿಯನ್ನು ಮುಜರಾಯಿ ಮಾಡಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದವರಿಗೂ ಅವರ ಸಂಪ್ರದಾಯದಂತೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕಳೆದ ನವೆಂಬರ್ ಸರ್ಕಾರ ಹೊರಡಿಸಿದ ಮಾರ್ಗಸೂತ್ರದ ಪ್ರಕಾರ, ಸಾಮೂಹಿಕ ವಿವಾಹವಾಗಬಯಸುವವರ ಪೋಷಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಒಂದು ವೇಳೆ ಪೋಷಕರ ಅನುಮತಿ ಪಡೆಯದೆ ಈ ಯೋಜನೆಯನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ಪ್ರೀತಿಸಿ ಮದುವೆಯಾಗುವವರಿಗೂ ಈ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಿಲ್ಲ. 90ರಿಂದ 100 ದೇವಾಲಯಗಳಲ್ಲಿ 1 ಸಾವಿರ ವಿವಾಹವೇರ್ಪಡಿಸುವ ಚಿಂತನೆ ನಡೆಸಲಾಗಿದೆ.

ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ನಡೆಯುವ ಮುನ್ನ 30 ತಿಂಗಳೊಳಗೆ ವಧು ವರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ. 

Stay up to date on all the latest ರಾಜ್ಯ news
Poll
Rohit Sharma

ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾದ ಸಾಧನೆಯ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp