ವಿರೋಧದ ನಡುವೆಯೂ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಶೃಂಗೇರಿಯಲ್ಲಿ ಚಾಲನೆ

ಸಮ್ಮೇಳನಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಉಂಟಾದ ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ವಿರೋಧದ ನಡುವೆಯೂ ಶುಕ್ರವಾರ ಚಾಲನೆ ದೊರೆತಿದೆ.
ಸಮ್ಮೇಳನಕ್ಕೆ ಅಧ್ಯಕ್ಷ ಕಲ್ಕುಳಿ ವಿಠಲ್ ಹೆಗ್ಡೆಯವರನ್ನು ಸ್ವಾಗತಿಸಿರುವುದು
ಸಮ್ಮೇಳನಕ್ಕೆ ಅಧ್ಯಕ್ಷ ಕಲ್ಕುಳಿ ವಿಠಲ್ ಹೆಗ್ಡೆಯವರನ್ನು ಸ್ವಾಗತಿಸಿರುವುದು

ಬೆಂಗಳೂರು: ಸಮ್ಮೇಳನಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಉಂಟಾದ ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ವಿರೋಧದ ನಡುವೆಯೂ ಶುಕ್ರವಾರ ಚಾಲನೆ ದೊರೆತಿದೆ.


ಶೃಂಗೇರಿಯಲ್ಲಿ ಎರಡು ದಿನಗಳ ಸಮ್ಮೇಳನಕ್ಕೆ ರಾಷ್ಟ್ರ ಧ್ವಜಾರೋಹಣದ ನೆರವೇರಿಸುವ ಮೂಲಕ ಸಾಹಿತಿ ಪುಟ್ಟಯ್ಯ ಚಾಲನೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕುಂದೂರು ಅಶೋಕ್ ಕಸಾಪ ಧ್ವಜಾರೋಹಣಗೈದರು.


ಚಿಂತಕ ಕಲ್ಕುಳಿ ವಿಠಲ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಸಲು ಒಪ್ಪದ ಕೆಲ ಬಲಪಂಥೀಯ ಸಂಘಟನೆಗಳು ಸಮ್ಮೇಳನ ನಡೆದಲ್ಲಿ ಶೃಂಗೇರಿ ಬಂದ್ ಮಾಡುವ, ವೇದಿಕೆಗೆ ನುಗ್ಗುವ ಬೆದರಿಕೆಗಳನ್ನೂ ಹಾಕಿವೆ. ಈ ಬೆದರಿಕೆಗಳ ಕಾರಣಕ್ಕೆ ನಾಡಿನ ಪ್ರಮುಖ ಸಾಹಿತಿಗಳು, ಪ್ರಗತಿಪರರು ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನದ ಯಶಸ್ವಿಗೆ ಪಣ ತೊಟ್ಟಿದ್ದಾರೆ. ಈಗಾಗಲೇ ನಾಡಿನ ವಿವಿಧ ಜಿಲ್ಲೆಗಳಿಂದ ಸಾಹಿತಿಗಳು, ಸಾಹಿತ್ಯಾಸಕ್ತರು ಜಿಲ್ಲೆಗೆ ಆಗಮಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com