ಪ್ರಕೃತಿ ಸೊಬಗಿನ ಅನಾವರಣ: ಡಿ.18 ಹಾಗೂ 19ರಂದು ಗಗನಚುಕ್ಕಿ ಜಲಪಾತೋತ್ಸವ

ಮಳವಳ್ಳಿಯ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮ ಡಿಸೆಂಬರ್ 18 ಹಾಗೂ 19ರಂದು ನಡೆಯಲ್ಲಿದೆ.
ಗಗನಚುಕ್ಕಿ
ಗಗನಚುಕ್ಕಿ

ಮಂಡ್ಯ: ಮಳವಳ್ಳಿಯ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮ ಡಿಸೆಂಬರ್ 18 ಹಾಗೂ 19ರಂದು ನಡೆಯಲ್ಲಿದೆ.

ಜಲಪಾತೋತ್ಸವಕ್ಕೆ ಈಗಿನಿಂದಲ್ಲೇ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಎಂ.ವಿ.ವೆಂಕಟೇಶ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಗನಚುಕ್ಕಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಇದು ರಾಜ್ಯದ ಹಾಗೂ ದೇಶದ ನಾನಾ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ರಾಜ್ಯ ಹಾಗೂ ದೇಶಕ್ಕೆ ಪರಿಚಯ ಮಾಡಿಕೊಡುವ ಸಲುವಾಗಿ ಗಗನಚುಕ್ಕಿ ಜಲಪಾತೋತ್ಸವದ ಜತೆಗೆ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಉತ್ಸವಕ್ಕೆ ಆಗಮಿಸುವ ಪ್ರವಾಸಿಗರ ಹಾಗೂ ಜನರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ, ವಾಹನ ನಿಲುಗಡೆ ಮಾಡಲು ಸ್ಥಳದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಗಗನಚುಕ್ಕಿ ಜಲಪಾತೋತ್ಸವ ವೀಕ್ಷಿಸಲು ಹೆಚ್ಚು ಜನ ಬರಬೇಕು. ಇದಕ್ಕಾಗಿ ಪ್ರಚಾರ ಮಾಡಲಾಗುತ್ತಿದ್ದು, ಇಲ್ಲಿನ ನೈಸರ್ಗಿಕ ಸ್ಥಳವನ್ನು ದೇಶಕ್ಕೆ ಪರಿಚಯಿಸುವ ಕೆಲಸವನ್ನು ಈ ಮೂಲಕ ಮಾಡಬೇಕಾಗಿದೆ. ವೇದಿಕೆಯನ್ನು ಸಮರ್ಪಕವಾಗಿ ಹಾಗೂ ಗುಣಮಟ್ಟದಿಂದ ನಿರ್ಮಾಣ ಮಾಡಬೇಕು. ಜತೆಗೆ ವೇದಿಕೆ ಪಕ್ಕದಲ್ಲಿ ಆಹಾರ ಮೇಳದ ಮಳಿಗೆಗಳನ್ನು ತೆರೆಯಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.

ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಪ್ರವಾಸಿಗರಿಗೆ ಅನುಕೂಲಕ್ಕಾಗಿ ನಿಯೋಜಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಮಿತಿ  ರಚಿಸಲಾಗುವುದು. ಜಲಪಾತ ಹಾಗೂ ವೇದಿಕೆಗೆ ವಿದ್ಯುತ್‌ ಅಲಂಕಾರ ಮಾಡಬೇಕು. ಇಲ್ಲಿವಿದ್ಯುತ್‌ ಅಡಚಣೆಯಾಗದಂತೆ ನೋಡಿಕೊಳ್ಳಬೇಕು. ಈ ಸಂದರ್ಭದಲ್ಲಿ ಜನರಿಗೆ ಜಲ ಸಾಹಸ ಕ್ರೀಡೆ, ಹೆಲಿಕಾಪ್ಟರ್ ರೈಡ್, ತೆಪೋತ್ಸವ, ಗಾಳಿಪಟ ಉತ್ಸವ, ಬೈಕ್ ರ್ಯಾಲಿ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಅಪರ ಜಿಲ್ಲಾಧಿಕಾರಿಗಳಾದ ಟಿ. ಯೋಗೇಶ್, ಉಪವಿಭಾಗಾಧಿಕಾರಿ ಸೂರಜ್‌,  ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com