ಪೌರತ್ವ ಕಾಯ್ದೆ ವಿರುದ್ಧ ಮೈಸೂರು ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ರಾಜ್ಯಪಾಲರಿಗೆ ವರದಿ ಸಲ್ಲಿಕೆ
ಪೌರತ್ವ ಕಾಯ್ದೆ ವಿರುದ್ಧ ಮೈಸೂರು ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ರಾಜ್ಯಪಾಲರಿಗೆ ವರದಿ ಸಲ್ಲಿಕೆ

ಪೌರತ್ವ ಕಾಯ್ದೆ ವಿರುದ್ಧ ಮೈಸೂರು ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ರಾಜ್ಯಪಾಲರಿಗೆ ವರದಿ ಸಲ್ಲಿಕೆ

ದೆಹಲಿಯ ಜವಹಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲಿನ ಹಲ್ಲೆ ಘಟನೆ ಖಂಡಿಸಿ ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದುಕ ಮೆರವಣಿಗೆ ಕುರಿತು ವರದಿ ನೀಡುವಂತೆ ರಾಜ್ಯಪಾಲರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ವರದಿ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. 

ಪ್ರತಿಭಟನೆ ವೇಳೆ ಸ್ವತಂತ್ರ ಕಾಶ್ಮೀರ ಫಲಕ ಪ್ರತ್ಯಕ್ಷ: ನಾಮಫಲಕ ಹಿಡಿದವರ ವಿರುದ್ಧ ಕಾನೂನು ಕ್ರಮ
ಬೆಂಗಳೂರು:
ದೆಹಲಿಯ ಜವಹಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲಿನ ಹಲ್ಲೆ ಘಟನೆ ಖಂಡಿಸಿ ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದುಕ ಮೆರವಣಿಗೆ ಕುರಿತು ವರದಿ ನೀಡುವಂತೆ ರಾಜ್ಯಪಾಲರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ವರದಿ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. 

ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ಶಿವಪ್ಪ ಅವರು ರಾಜ್ಯಪಾಲ ವಿ.ಆರ್ ವಾಲಾ ಅವರಿಗೆ ಪ್ರತಿಭಟನೆ ಹಾಗೂ ಮೆರವಣಿಗೆ ಕುರಿತು ವರದಿ ಸಲ್ಲಿಸಿದ್ದಾರೆ. 

ಸಂಜೆ ನಡೆದ ಪ್ರತಿಭಟನಾ ಸಭೆಯಲ್ಲಿ ಕೆಲ ವಿದ್ಯಾರ್ಥಿಗಳು ಇದ್ದಕ್ಕಿಂತೆ ಸ್ವತಂತ್ರ ಕಾಶ್ಮೀರ ನಾಮಫಲಕವನ್ನು ಪ್ರದರ್ಶಿಸಿದ್ದಾರೆ. ಇದು ಆಕ್ರೋಶಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ನಾಮಫಲಕ ಹಿಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೆ, ಅನುಮತಿ ಪಡೆಯದೆಯೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಸಂಘಟನೆಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಪ್ರತಿಭಟನೆ ನಡೆಸಿದ ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಅಸೋಸಿಯೇಷನ್, ದಲಿತ ವಿದ್ಯಾರ್ಥಿ ಫೆಡರೇಷನ್, ಬಹುಜನ ವಿದ್ಯಾರ್ಥಿ ಸಂಘ, ಸ್ಟೂಡೆಟ್ ಫೆಡರೇಷನ್, ಬಹು ಜನ ವಿದ್ಯಾರ್ಥಿ ಸಂಘ, ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಎಐಡಿಎಸ್ಒ ಸೇರಿದಂತೆ ವಿವಿಧ ಸಂಘಟನೆಗಳಿಗೆ ನೋಟಿಸ್ ನೀಡಲಾಗಿದೆ. 

ಈ ಸಂಘಟನೆಗಳು ಪೊಲೀಸ್ ಹಾಗೂ ವಿಶ್ವವಿದ್ಯಾಲಯದಿಂದ ಅನುಮತಿ ಪಡೆಯದ ಕಾರಣ ನೋಟಿಸ್ ನೀಲಾಗಿದೆ ಎಂದು ಶಿವಪ್ಪ ಅವರು ತಿಳಿಸಿದ್ದಾರೆ. 

ಮೆರವಣಿಗೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದ್ದು, ಆರಂಭದಲ್ಲಿ ಸ್ವತಂತ್ರ ಕಾಶ್ಮೀರ ಎಂಬ ನಾಮಫಲಕ ಎಲ್ಲಿಯೂ ಕಂಡು ಬಂದಿರಲಿಲ್ಲ. ಆದರೆ, ಕೊನೇ ಗಳಿಗೆಯಲ್ಲಿ ಪ್ರತಿಭಟನಾ ಸಬೆಯಲ್ಲಿ ಈ ಫಲಕ ಕಾಣಿಸಿಕೊಂಡಿದೆ. ಈ ಸಂಬಂಧ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ರಮ ಜರುಗಿಸುಂತೆ ದೂರು ನೀಡಲಾಗಿದೆ ಎಂದಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com