ಸಕಲ ಸರ್ಕಾರಿ ಗೌರವದೊಂದಿಗೆ ಚಿದಾನಂದಮೂರ್ತಿ ಅಂತ್ಯಕ್ರಿಯೆ

ಹಿರಿಯ ಸಾಹಿತಿ, ಸಂಶೋಧಕ ಚಿದಾನಂದ ಮೂರ್ತಿಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ, ಇಂದು ಸುಮನಹಳ್ಳಿಯ ಚಿತಾಗಾರದಲ್ಲಿ ಸಕಲ ಸರ್ಕರಿ ಗೌರವಗಳೊಂದಿಗೆ ಜರುಗಿದೆ.
ಚಿದಾನಂದ ಮೂರ್ತಿ
ಚಿದಾನಂದ ಮೂರ್ತಿ

ಬೆಂಗಳೂರು: ಹಿರಿಯ ಸಾಹಿತಿ, ಸಂಶೋಧಕ ಚಿದಾನಂದ ಮೂರ್ತಿಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ, ಇಂದು ಸುಮನಹಳ್ಳಿಯ ಚಿತಾಗಾರದಲ್ಲಿ ಸಕಲ ಸರ್ಕರಿ ಗೌರವಗಳೊಂದಿಗೆ ಜರುಗಿದೆ.

ಬೆಳಿಗ್ಗೆ 11 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆದಿದ್ದು, ಅಲ್ಲಿಯವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು, ಚಿದಾನಂದಮೂರ್ತಿಯವರ ಬಂಧುಗಳು, ಅಪಾರ ಅಭಿಮಾನಿಗಳು ಹಾಜರಿದ್ದರು. ಅಂತ್ಯಕ್ರಿಯೆ ವೇಳೆ ‘ಅಮರರಾಗಲಿ ಚಿದಾನಂದಮೂರ್ತಿ’, ‘ಸಿರಿಗನ್ನಡಂ ಗೆಲ್ಗೆ’ ಎಂಬ ಘೋಷಣೆಗಳು ಕೇಳಿಬಂದವು.

ವೀರಶೈವ–ಲಿಂಗಾಯತ ಪದ್ಧತಿಯಲ್ಲಿ ದೇಹವನ್ನು ಸಮಾಧಿ ಮಾಡುವ ಸಂಪ್ರದಾಯ ಇದೆ. ಆದರೆ, ಚಿದಾನಂದಮೂರ್ತಿಯವರು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸುವಂತೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಸುಮನಹಳ್ಳಿಯ ಚಿತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com