ಬೆಂಗಳೂರು: ಸಿಸಿಬಿ ಅಧಿಕಾರಿಗಳಿಂದ ಖಲಿಸ್ತಾನದ ಪ್ರತ್ಯೇಕತಾವಾದಿ ಬಂಧನ

ಖಲಿಸ್ತಾನದ ಪ್ರತ್ಯೇಕತಾವಾದಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಖಲಿಸ್ತಾನದ ಪ್ರತ್ಯೇಕತಾವಾದಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಉತ್ತರ ಭಾರತ ಮೂಲದ ಖಲಿಸ್ತಾನದ ಪ್ರತ್ಯೇಕತಾವಾದಿ ಜರ್ನಲ್​ ಸಿಂಗ್​ ಸಿದ್ದು ಎಂಬಾತನನ್ನು ನಗರದ ಸಂಪಿಗೆಹಳ್ಳಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಸಿದ್ದು ಕಳೆದ 6 ತಿಂಗಳಿಂದ ಬೆಂಗಳೂರಿನ ಸಂಪಿಗೆಹಳ್ಳಿ
ಬೆಂಗಳೂರು: ಖಲಿಸ್ತಾನದ ಪ್ರತ್ಯೇಕತಾವಾದಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಭಾರತ ಮೂಲದ ಖಲಿಸ್ತಾನದ ಪ್ರತ್ಯೇಕತಾವಾದಿ ಜರ್ನಲ್​ ಸಿಂಗ್​ ಸಿದ್ದು ಎಂಬಾತನನ್ನು ನಗರದ ಸಂಪಿಗೆಹಳ್ಳಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದು ಕಳೆದ 6 ತಿಂಗಳಿಂದ ಬೆಂಗಳೂರಿನ ಸಂಪಿಗೆಹಳ್ಳಿ

ಬೆಂಗಳೂರು: ಖಲಿಸ್ತಾನದ ಪ್ರತ್ಯೇಕತಾವಾದಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಭಾರತ ಮೂಲದ ಖಲಿಸ್ತಾನದ ಪ್ರತ್ಯೇಕತಾವಾದಿ ಜರ್ನಲ್​ ಸಿಂಗ್​ ಸಿದ್ದು ಎಂಬಾತನನ್ನು ನಗರದ ಸಂಪಿಗೆಹಳ್ಳಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿದ್ದು ಕಳೆದ 6 ತಿಂಗಳಿಂದ ಬೆಂಗಳೂರಿನ ಸಂಪಿಗೆಹಳ್ಳಿ ರಾಧಾಕೃಷ್ಣ ಪಿಜಿಯಲ್ಲಿ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.  ಮೂಲತಃ ತೆಲಂಗಾಣದ ಹೈದರಾಬಾದ್​ ನಿವಾಸಿಯಾಗಿರುವ ಈತ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ. ಇದರೊಡನೆಯೇ ಖಲಿಸ್ಥಾನ್ ಪ್ರತ್ಯೇಕ ರಾಷ್ಟ್ರಕ್ಕೆ ಹೋರಾಟ ನಡೆಸಿದ್ದನೆಂದು ಅಧಿಕಾರಿಗಳು ಹೇಳಿದ್ದಾರೆ.

ಸಿಖ್ಖರ ವಿರುದ್ಧ ಕೆಲಸ ಮಾಡುವವರ ವಿರುದ್ಧ ಸಮರ ಸಾರಿದ್ದ ಜರ್ನಲ್​ ಸಿಂಗ್​​ ವಿರುದ್ಧ ಪಂಜಾಬಿನ ಮೊಹಾಲಿಯಲ್ಲಿ ಸಹ ಪ್ರಕರಣ ದಾಖಲಾಗಿತ್ತು.2019ರ ಫೆಬ್ರವರಿಯಲ್ಲಿ ಮೊಹಾಲಿ ಐಎಸ್​​ಡಿ (ಆಂತರಿಕ ಭದ್ರತಾ ವಿಭಾಗ) ಪ್ರಕರಣ ದಾಖಲಿಸಿತ್ತು. ಆದರೆ ದೂರು ದಾಖಲಾಗುತ್ತಿದ್ದಂತೆ ಆತ ಪಂಜಾಬ್ ತೊರೆದು ಬೆಂಗಳೂರಿಗೆ ಬಂದಿದ್ದ. ಪಂಜಾಬ್ ಪೋಲೀಸರು ಈತನಿಗೆ ಶೋಧ ನಡೆಸಿದ್ದು ಈತ ಬೆಂಗಳೂರಿನಲ್ಲಿರುವ ವಿಚಾರ ತಿಳಿದು ಸಿಸಿಬಿ ಅವರ ನೆರವು ಕೋರಿದ್ದರು. 

ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಸಿಸಿಬಿಯ ಇನ್ಸ್ ಪೆಕ್ಟರ್ ಕೇಶವ್ ಮೂರ್ತಿ ಆರೋಪಿಯನ್ನು ಬಂಧಿಸಿದ್ದು ಸದ್ಯ ಆತನನ್ನು ಪಂಜಾಬ್ ಪೋಲೀಸರಿಗೆ ಒಪ್ಪಿಸಿದ್ದಾಗಿ ಮಾಹಿತಿ ಲಭಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com