ಆಯ್ದ ವಿಡಿಯೋಗಳನ್ನು ಕೆಲವರು ಬಿಡುಗಡೆ ಮಾಡಿದ್ದಾರೆ: ಮಂಗಳೂರು ಪೊಲೀಸ್

ಮಂಗಳೂರು ಗಲಭೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ವಿಡಿಯೋ ಬಿಡುಗಡೆ ಮಾಡಿ ಪೊಲೀಸರ ವಿರುದ್ಧ ಆರೋಪ ಮಾಡಿದ ಬೆನ್ನಲ್ಲವೇ ಈಗ ಮಂಗಳೂರು ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. 

Published: 12th January 2020 12:05 PM  |   Last Updated: 12th January 2020 12:05 PM   |  A+A-


kumaraswamy

ಕುಮಾರಸ್ವಾಮಿ

Posted By : Manjula VN
Source : The New Indian Express

ಮಂಗಳೂರು: ಮಂಗಳೂರು ಗಲಭೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ವಿಡಿಯೋ ಬಿಡುಗಡೆ ಮಾಡಿ ಪೊಲೀಸರ ವಿರುದ್ಧ ಆರೋಪ ಮಾಡಿದ ಬೆನ್ನಲ್ಲವೇ ಈಗ ಮಂಗಳೂರು ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. 

ಘಟನೆ ಕುರಿತು ಕೆಲವರು ಮಾಧ್ಯಮಕ್ಕೆ ಕೆಲ ಆಯ್ದ ತುಣುಕುಗಲನ್ನಷ್ಟೇ ಬಿಡುಗಡೆ ಮಾಡಿದ್ದಾರೆ. ಘಟನೆ ಕುರಿತು ಸಿಐಡಿ ಮತ್ತು ಮ್ಯಾಜಿಸ್ಟ್ರೇಟ್ ಮೂಲಕ ಪ್ರತ್ಯೇಕ ಕುರಿತು ಸಿಐಡಿ ಮತ್ತು ಮ್ಯಾಜಿಸ್ಟ್ರೇಟ್ ಮೂಲಕ ಪ್ರತ್ಯೇಕ ತನಿಖೆ ನಡೆಯುತ್ತಿದ್ದು ಆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ತಿಳಿಸಿದ್ದಾರೆ. 

ಇದರಂತೆ ವಿಡಿಯೋ ಬಿಡುಗಡೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕುಮಾರಸ್ವಾಮಿಯವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. 

ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಸಿಡಿ ಗೆಲ್ಲಾ ಅರ್ಥವಿದೆಯಾ? ತಂತ್ರಜ್ಞಾನವನ್ನು ಬಳಸಿಕೊಂಡು ಯಾರು, ಹೇಗೆ ಬೇಕಾದರೂ ಸೃಷ್ಟಿಸಬಹುದು. ಅದೊಂದು ಕಟ್ ಆ್ಯಂಡ್ ಪೇಸ್ಟ್ ಸಿಡಿ ಎಂದು ಲೇವಡಿ ಮಾಡಿದ್ದಾರೆ. 

Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp