ಹಿಂದುತ್ವ ಪ್ರತಿಪಾದನೆಗೆ ಸಿಎಎ ಜಾರಿ: ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ

ಭಾರತ ದೇಶವನ್ನು ಒಡೆದು ಹಿಂದುತ್ವವನ್ನು ಪ್ರತಿಪಾದಿಸುವ  ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಸ್ವಾತಂತ್ರ್ಯ  ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಆರೋಪಿಸಿದ್ದಾರೆ.

Published: 13th January 2020 10:41 PM  |   Last Updated: 13th January 2020 10:41 PM   |  A+A-


HS Doreswamy

ಎಚ್ ಎಸ್ ದೊರೆಸ್ವಾಮಿ

Posted By : Vishwanath S
Source : UNI

ಬೆಂಗಳೂರು: ಭಾರತ ದೇಶವನ್ನು ಒಡೆದು ಹಿಂದುತ್ವವನ್ನು ಪ್ರತಿಪಾದಿಸುವ  ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಸ್ವಾತಂತ್ರ್ಯ  ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು  ಪೂರ್ವ ತಾಲ್ಲೂಕು ಪ್ರಗತಿಪರ ಒಕ್ಕೂಟ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್‌ಸಿ ಹಾಗೂ ಎನ್‌ಪಿಆರ್ ವಿರುದ್ಧ ಕೆ.ಆರ್.ಪುರದಲ್ಲಿ ಸೋಮವಾರ  ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಅವರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ದೇಶದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. 2024ರ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲಲು ನಿರಂತರ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು.

ಸಿಎಎ ಜಾರಿಗೆ ಬಂದಾಗಿನಿಂದ ದೇಶದಲ್ಲಿ ಪರ-ವಿರೋಧ ಪ್ರತಿಭಟನೆಗಳು ನಡೆಯುತ್ತಿವೆ. 

Stay up to date on all the latest ರಾಜ್ಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp