ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್

 ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಅವಹೇಳನಕಾರಿ ಪೋಸ್ಟ್: ಇಬ್ಬರ ವಿರುದ್ಧ ದೂರು ದಾಖಲು

ಶಾಸಕ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಹಿನ್ನಲೆಯಲ್ಲಿ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಶಾಸಕ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಹಿನ್ನಲೆಯಲ್ಲಿ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀರ್ ಅವರ ಪಿ ಎ ಅಯೂಬ್ ಪಾಷಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೋಸ್ಟ್ ಪ್ರಕಟಿಸಿದ್ದಾರೆ ಎನ್ನಲಾದ ಶರತ್ ಐಟಿಐಹಾಗೂ ಋಷಿಕುಮಾರ್ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು. ಎನ್ ಆರ್ ಸಿ ಕಾಯ್ದೆ ಸಂಬಂಧ  ಜಮೀರ್ ಅವರನ್ನು ಗುರಿಯಾಗಿಸಿಕೊಂಡು ಪೋಸ್ಟ್ ಹಾಕಲಾಗಿತ್ತು,  ಈ ಪೋಸ್ಟ್ ವೈರಲ್ ಆಗಿತ್ತು,.

‘ಅವಹೇಳನಕಾರಿ ಪೋಸ್ಟ್‌ನಿಂದಾಗಿ ಶಾಸಕ ಜಮೀರ್ ಅಹಮದ್ ಖಾನ್ ಗೌರವಕ್ಕೆ ಧಕ್ಕೆ ಉಂಟಾಗಿದೆ. ಮುಸ್ಲಿಂ ಸಮುದಾಯದವರನ್ನು ಪ್ರಚೋದಿಸುವ ಪೋಸ್ಟ್ ಇದಾಗಿದೆ ಎಂದು ಅಯೂಬ್ ಪಾಷಾ ಆರೋಪಿಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ತಿಳಿಸಿದರು.

Related Stories

No stories found.

Advertisement

X
Kannada Prabha
www.kannadaprabha.com