ಧಾರವಾಡ: ಕಾರು - ವ್ಯಾನ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ  ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

ಕಾರು ಹಾಗೂ ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ  ನಾಲ್ವರು  ಸ್ಥಳದಲ್ಲೇ  ಮೃತಪಟ್ಟಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಂಗಳವಾರ ನಗರದ ಹೊರವಲಯದಲ್ಲಿ  ನಡೆದಿದೆ.

Published: 14th January 2020 07:16 PM  |   Last Updated: 14th January 2020 07:16 PM   |  A+A-


Accident

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ಧಾರವಾಡ: ಕಾರು ಹಾಗೂ ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ  ನಾಲ್ವರು  ಸ್ಥಳದಲ್ಲೇ  ಮೃತಪಟ್ಟಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಂಗಳವಾರ ನಗರದ ಹೊರವಲಯದಲ್ಲಿ  ನಡೆದಿದೆ.

ಧಾರವಾಡ ನಗರದ ಹೊರವಲಯದ  ರಾಷ್ಟ್ರೀಯ ಹೆದ್ದಾರಿ ೪ರ ಯರಿಕೊಪ್ಪದಲ್ಲಿ ಈ ಅಪಘಾತ ಸಂಭವಿಸಿದೆ.

ಮೃತ ದುರ್ದೈವಿಗಳನ್ನು ಕೊಪ್ಪಳದ ಭಾಗ್ಯನಗರ ವಾಸಿಗಳಾದ ರುದ್ರಪ್ಪ ಮರಿಕುರಿ, ಈರಮ್ಮ ಮರಿಕುರಿ, ಮಂಜುನಾಥ ಮರಿಕುರಿ ಹಾಗೂ ಶಿವಾನಂದ್ ಅಲ್ವಾಡಿ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕಲ್ಪಿಸಲಾಗುತ್ತಿದೆ.

ಕೊಪ್ಪಳದ ಆರು ಮಂದಿ ಬೆಳಗಾವಿಗೆ ಕಾರಿನಲ್ಲಿ ತೆರಳುತ್ತಿದ್ದರು, ಎದುರಿಗೆ ಬಂದ ವ್ಯಾನ್,  ಕಾರು ಗೆ  ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡು ವರ್ಷದ ಮಗು ಶಿವಾನಂದ  ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ವರ್ತಿಕಾ ಕಟಿಯಾರ್ ಹೇಳಿದ್ದಾರೆ.

ಈರಮ್ಮ ಎಂಬುವವರ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲೆ ಗಂಗಾವತಿ ಮೂಲದ ರುದ್ರಪ್ಪ ಮರಿಕುರಿ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವ್ಯಾನ್ ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ ಎಂದು  ಪ್ರತ್ಯಕ್ಷ ದರ್ಶಿಗಳು  ಹೇಳಿದ್ದಾರೆ.

ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ  ದಾಖಲಿಸಿಕೊಳ್ಳಲಾಗಿದೆ.

Stay up to date on all the latest ರಾಜ್ಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp