ಶಿಕ್ಷಣ ಇಲಾಖೆಯ ಸಮಸ್ಯೆ ದೂರಾಗಿಸಲು ಶೀಘ್ರದಲ್ಲೇ ಸಹಾಯವಾಣಿ ಆರಂಭ: ಸಚಿವ ಸುರೇಶ್ ಕುಮಾರ್

ಶಿಕ್ಷಣ ಇಲಾಖೆಯಲ್ಲಿನ ಕುಂದುಕೊರತೆ, ಸಮಸ್ಯಗಳನ್ನು ಆಲಿಸಲು ಮಾ.31ರಂದು 247 ಉಚಿತ ಸಹಾಯವಾಣಿ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. 
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಉಡುಪಿ: ಶಿಕ್ಷಣ ಇಲಾಖೆಯಲ್ಲಿನ ಕುಂದುಕೊರತೆ, ಸಮಸ್ಯಗಳನ್ನು ಆಲಿಸಲು ಮಾ.31ರಂದು 247 ಉಚಿತ ಸಹಾಯವಾಣಿ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. 

ಉಡುಪಿ ಜಿಲ್ಲೆ ಮಣೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ಆಗಬೇಕಾಗಿರುವ ಸುಧಾರಣೆಗಳು, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಶಿಕ್ಷಕರು, ಸಾರ್ವಜನಿಕರು, ಪೋಷಕರು, ವಿದ್ಯಾರ್ಥಿಗಳು ಈ ಸಹಾಯವಾಣಿಯ ಮೂಲಕ ಪರಿಹಾರ ಪಡೆಯಲು ಹಾಗೂ ಸಲಹೆ ನೀಡಬಹುದಾಗಿದೆ ಎಂದು ಹೇಳಿದ್ದಾರೆ. 

ಶಿಕ್ಷಣ ಇಲಾಖೆಯನ್ನು ಉನ್ನತ ಶೈಲೆಯಲ್ಲಿ ಮುನ್ನಡೆಸಬೇಕು. ಶೀಘ್ರದಲ್ಲೇ ಹೊಸ ಆ್ಯಪ್ ವೊಂದನ್ನು ಇಲಾಖೆ ಹೊರತರಲಿದ್ದು, ಈ ಆ್ಯಪ್ ಮೂಲಕ ಸರ್ಕಾರಿ ಶಾಲೆಗಳಲ್ಲಿ ಬೋದನೆ ಮಾಡಲು ಇಚ್ಛಿಸಿ ಸ್ವಯಂಪ್ರೇರಿತರಾಗಿ ಬರುವ ಶಿಕ್ಷಕರಿಗೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಮಕ್ಕಳ ಬ್ಯಾಗ್ ಗಳ ಕುರಿತಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ತಿಂಗಳಿನಲ್ಲಿ ಎರಡು ದಿನ ನೋ ಬ್ಯಾಗ್ ಡೇ ಆಚರಿಸಲಾಗುತ್ತದೆ. ಇಂತಹ ದಿನಗಳಲ್ಲಿ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ. 

ಇದೇ ವೇಳೆ ಶಿಕ್ಷಕರಿಗೆ ಕಿವಿಮಾತು ಹೇಳಿರುವ ಸಚಿವರು, ಶಾಲಾ ಶಿಕ್ಷಕ-ಶಿಕ್ಷಕಿಯರು ತಾಯಿ ಹೃದಯ ಹೊಂದಿರಬೇಕು. ಆದರೆ, ಇತ್ತೀಚೆಗೆ ಇದಕ್ಕೆ ವ್ಯತಿರಿಕ್ತವಾದ ವರ್ತನೆಗಳು ಕಂಡು ಬರುತ್ತಿವೆ ಎಂದು ಹೇಳುವ ಮೂಲಕ ಪಕ್ಕೆಲುಬು ಶಬ್ಧವನ್ನು ಉಚ್ಚರಿಸಲು ಸಾಧ್ಯವಾಗದ ಬಾಲಕನೊಬ್ಬನ ಪ್ರಯತ್ನವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಶಿಕ್ಷಕರೊಬ್ಬರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com