ಶಿವಲಿಂಗಕ್ಕೆ ಸೂರ್ಯಾಭಿಷೇಕ: ಗವಿಗಂಗಾಧರೇಶ್ವರ ದೇಗುಲದ ಕೌತಕ ಕಣ್ತುಂಬಿಕೊಳ್ಳಲು ಕ್ಷಣಗಣನೆ ಆರಂಭ

ಮಕರ ಸಂಕ್ರಾಂತಿ ದಿನವಾದ ಬುಧವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ. 

Published: 15th January 2020 11:41 AM  |   Last Updated: 15th January 2020 11:41 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ಬುಧವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ. 

ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5.20ರಿಂದ 5.30 ಮಧ್ಯದಲ್ಲಿ ಒಂದು ನಿಮಿಷ ಹಾದು ಹೋಗಲಿದೆ. ಇದರಿಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ. 

ಗವಿಗಂಗಾಧರೇಶ್ವ ಸ್ವಾಮಿ ದೇಗುಲ 16ನೇ ಶತಮಾನದ ಕೆಂಪೇಗೌಡರ ಕಾಲದ್ದಾಗಿದ್ದು, ದೇಗುಲದಲ್ಲಿ ಸಾಕಷ್ಟು ಕೌತುಕಗಳು ಅಡಗಿವೆ ಎಂದು ಹೇಳಲಾಗುತ್ತದೆ. 

ಮಕರ ಸಂಕ್ರಾಂತಿಯ ದಿನದಂದು ಸೂರ್ಯನ ಕಿರಣಗಳು ನಂದಿಯ ತಲೆಯ ಮಧ್ಯಭಾಗದ ಮೂಲಕ ಹಾದು ಗುಹೆಯೊಳಗಿರುವ ಶಿವಲಿಂಗದ ತಳಭಾಗವನ್ನು ಮೊದಲು ಸ್ಪರ್ಶಿಸುತ್ತದೆ. ನಂತರ ಸ್ವಲ್ಪ ಸ್ವಲ್ಪವಾಗಿ ಮೇಲೆ ಸಾಗುತ್ತ ಸುಮಾರು 1 ಗಂಟೆಗಳ ಕಾಲ ಗಂಗಾಧರೇಶ್ವರನಿಗೆ ಸೂರ್ಯಾಭಿಷೇಕ ಮಾಡುತ್ತದೆ. 

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp