ಹೆಚ್'ಡಿಕೆಗೆ ಭೂಕಬಳಿಕೆಯ ಸಂಕಷ್ಟ: ಲೋಕಾಯುಕ್ತ ಆದೇಶ ಪಾಲಿಸಲು ಸಿದ್ಧ ಎಂದ ಸರ್ಕಾರ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಸಂಬಂಧಿ ಸಾವಿತ್ರಮ್ಮ ಮತ್ತು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಜಮೀನು ಕಬಳಿಕೆ ಮಾಡಿರುವ ಸಂಬಂಧ ಲೋಕಾಯುಕ್ತರು 2014ರಲ್ಲಿ ಹೊರಡಿಸಿರುವ ಆದೇಶವನ್ನು ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್'ಗೆ ತಿಳಿಸಿದೆ. 

Published: 15th January 2020 10:08 AM  |   Last Updated: 15th January 2020 10:08 AM   |  A+A-


kumaraswamy

ಕುಮಾರಸ್ವಾಮಿ

Posted By : Manjula VN
Source : The New Indian Express

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಸಂಬಂಧಿ ಸಾವಿತ್ರಮ್ಮ ಮತ್ತು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಜಮೀನು ಕಬಳಿಕೆ ಮಾಡಿರುವ ಸಂಬಂಧ ಲೋಕಾಯುಕ್ತರು 2014ರಲ್ಲಿ ಹೊರಡಿಸಿರುವ ಆದೇಶವನ್ನು ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್'ಗೆ ತಿಳಿಸಿದೆ. 

ಈ ಕುರಿತು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಹಿರೇಮಠ ಸಲ್ಲಿಸಿರುವ ಸಾರ್ಜಜನಿಕ ಹಿತಾಸಕ್ತಿ ಆರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. 

ವಿಚಾರಣೆ ವೇಳೆ ರಾಜ್ಯ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ವಾದಿಸಿ, ಲೋಕಾಯುಕ್ತರು 2014ರ ಆ.5ರಂದು ಹೊರಡಿಸಿರುವ ಆದೇಶವನ್ನು ಮೂರು ತಿಂಗಳುಗಳಲ್ಲಿ ಅನುಷ್ಟಾನ ಮಾಡಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥಪಡಿಸಿತು. 

ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ವಿವಿಧ ಸರ್ವೆ ನಂಬರ್ ಗಳಲ್ಲಿ ಸುಮಾರು 54 ಎಕರೆ ಜಮೀನನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಬಂಧಿ ಸಾವಿತ್ರಮ್ಮ ಮತ್ತು ಶಾಸಕ ಡಿಸಿ.ತಮ್ಮಣ್ಣ ಕಬಳಿಕೆ ಮಾಡಿದ್ದಾರೆ. ಕಬಳಿಕೆ ಮಾಡಿರುವ ಜಮೀನುಗಳು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿದೆ. ಅದರ ಮಾರುಕಟ್ಟೆ ಮೌಲ್ಯ ಪ್ರತಿ ಎಕರೆಗೆ ಸುಮಾರು 75 ಲಕ್ಷದಿಂದ 1 ಕೋಟಿ ಇದೆ ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರುಪಾಯಿ ನಷ್ಟವಾಗಿದೆ ಎಂದು ಅರ್ಜಿಯಲ್ಲಿ ದೂರಿದ್ದರು. 

ಅಲ್ಲದೆ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತಿತರರು ಮಾಡಿರುವ ಭೂ ಒತ್ತುವರಿ ವಿರುದ್ಧ 15 ದಿನಗಳಲ್ಲಿ ಕ್ರಮ ಜರುಗಿಸಬೇಕು ಎಂದು ಸರ್ಕಾರ ನಿರ್ದೇಶಿಸಿ ಕರ್ನಾಟಕ ಲೋಕಾಯುಕ್ತ 2014 ಆ.5 ರಂದು ಆದೇಶ ಮಾಡಿದ್ದರು. ಆದರೆ, ಸರ್ಕಾರ ಈ ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿತ್ತು. ಅರ್ಜಿಯ ಕಳೆದ ವಿಚಾರಣೆ ವೇಳೆ ಲೋಕಾಯುಕ್ತರ ಆದೇಶ ಆಧರಿಸಿ ಕೈಗೊಂಡಿರುವ ಕ್ರಮಗಳ ಕುರಿತು ಜ.14ರಂದು ವಿವರಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. 

Stay up to date on all the latest ರಾಜ್ಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp