ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಇಳಿಸಲು ಯಡಿಯೂರಪ್ಪ ಸರ್ಕಾರ ಚಿಂತನೆ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷಿ  ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಲು ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿದೆ.
ಅಕ್ಕಿ
ಅಕ್ಕಿ

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷಿ  ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಲು ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿದೆ.

ಈ  ಹಿನ್ನೆಲೆಯಲ್ಲಿ ಆಹಾರ ಇಲಾಖೆಯಿಂದ ಅನ್ನಭಾಗ್ಯ ಯೋಜನೆಯಲ್ಲಿ ನೀಡುತ್ತಿರುವ ಅಕ್ಕಿ  ಪ್ರಮಾಣ ಕಡಿಮೆ ಮಾಡುವ ಬಗ್ಗೆ ಸರ್ಕಾರ ವಿಸ್ತೃತ ಮಾಹಿತಿ ಪಡೆದುಕೊಂಡಿದ್ದು, ಅಕ್ಕಿ  ಬದಲು ಎಣ್ಣೆ ಹಾಗೂ ತೊಗರಿ ಬೇಳೆ ಮತ್ತು ಉಪ್ಪು ನೀಡುವ ಬಗ್ಗೆಯೂ ಇಲಾಖೆಯ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ತಕ್ಷಣ  ಘೋಷಣೆ ಮಾಡಿ ಜಾರಿಗೆ ತಂದಿದ್ದ ಕಾಂಗ್ರೆಸ್  ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಪ್ರತಿ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ಹಾಗೂ ಬಿಪಿಎಲ್ ಕಾರ್ಡ್‍ದಾರರಿಗೆ ಪ್ರತಿ ವ್ಯಕ್ತಿಗೂ 7 ಕೆಜಿಯಂತೆ ಕುಟುಂಬದ ಎಲ್ಲ ಸದಸ್ಯರಿಗೂ ಉಚಿತವಾಗಿ ಅಕ್ಕಿಯನ್ನು ನೀಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com