ದ್ವಿತೀಯ ಪಿ.ಯು.ಪರೀಕ್ಷೆ, ಪೂರ್ವ ಸಿದ್ಧತೆ ಕುರಿತು ಕ್ರಮ ಕೈಗೊಳ್ಳಲು ಸಚಿವ ಸುರೇಶ್ ಕುಮಾರ್ ಸೂಚನೆ

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೆ  ಕೂಡಲೇ ಪೂರ್ವಭಾವಿ ಕ್ರಮಗಳನ್ನು ಕೈಗೊಂಡು ಅತ್ಯಂತ ಜಾಗರೂಕತೆಯಿಂದ ಪರೀಕ್ಷಾ ಪ್ರಕ್ರಿಯೆ ನಡೆಸಬೇಕು ಹಾಗೂ ಉನ್ನತ ಮೌಲ್ಯಮಾಪನಾ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಚಿವ ಎಸ್. ಸುರೇಶ್ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೆ  ಕೂಡಲೇ ಪೂರ್ವಭಾವಿ ಕ್ರಮಗಳನ್ನು ಕೈಗೊಂಡು ಅತ್ಯಂತ ಜಾಗರೂಕತೆಯಿಂದ ಪರೀಕ್ಷಾ ಪ್ರಕ್ರಿಯೆ ನಡೆಸಬೇಕು ಹಾಗೂ ಉನ್ನತ ಮೌಲ್ಯಮಾಪನಾ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರೊಂದಿಗೆ ಈ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವ್ಯವಸ್ಥಿತ ನಿರ್ವಹಣೆ ಕುರಿತಂತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 2,46,772 ವಿದ್ಯಾರ್ಥಿಗಳು ಹಾಜರಾಗುತ್ತಿದ್ದು,  ಫೆಬ್ರುವರಿ ಮಾಹೆಯಲ್ಲಿ ಜಿಲ್ಲಾಧಿಕಾರಿಗಳು, ಖಜಾನಾಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳ ಸಭೆ ಆಯೋಜಿಸಿ ಅತ್ಯಂತ ಸುಸಜ್ಜಿತವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 

2020ರ ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಜ.25 ರಿಂದ ಫೆ.10ರ ವರೆಗೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದ ಅಭ್ಯರ್ಥಿಗಳ ಪಟ್ಟಿ, ಅಂಕ ಪಟ್ಟಿ ಹಾಗೂ ಉತ್ತರ ಪತ್ರಿಕೆಗಳನ್ನು ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಗೆ ಕೂಡಲೇ ರವಾನಿಸಬೇಕು ಎಂದರು. 

ಅಲ್ಲದೇ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನೇರವಾಗಿ ಆನ್ಲೈನ್ ಮೂಲಕ ಕೇಂದ್ರಕ್ಕೆ ರವಾನಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕೈಗೊಂಡಿರುವ ಕ್ರಮವನ್ನು ಪರೀಶೀಲಿಸಿ ಮೆಚ್ಚುಗೆ ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com