ದಾವೋಸ್‌ ಶೃಂಗಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಜಗದೀಶ್ ಶೆಟ್ಟರ್, ಅಧಿಕಾರಿಗಳ ನಿಯೋಗ ಭಾಗಿ

ದಾವೋಸ್‌ನಲ್ಲಿ ಜ.21ರಿಂದ 24ರವರೆಗೆ ಹಮ್ಮಿಕೊಂಡಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಳ್ಳಲಿದ್ದಾರೆ.

Published: 17th January 2020 03:52 PM  |   Last Updated: 17th January 2020 03:52 PM   |  A+A-


CM Yeddyurappa and Industrial minister Jagadish Shettar to take part in Davos world economic forum

ದಾವೋಸ್‌ ಶೃಂಗಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಜಗದೀಶ್ ಶೆಟ್ಟರ್, ಅಧಿಕಾರಿಗಳ ನಿಯೋಗ ಭಾಗಿ

Posted By : Srinivas Rao BV
Source : UNI

ಬೆಂಗಳೂರು: ದಾವೋಸ್‌ನಲ್ಲಿ ಜ.21ರಿಂದ 24ರವರೆಗೆ ಹಮ್ಮಿಕೊಂಡಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಳ್ಳಲಿದ್ದಾರೆ.

ಅವರೊಂದಿಗೆ ಸಮ್ಮೇಳನದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌,  ಐಟಿ ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ,  ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ,  ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಪಾಲ್ಗೊಳ್ಳಲಿದ್ದಾರೆ.

ಈ  ಸಂಬಂಧ  ಖನಿಜ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೆಟ್ಟರ್, ಈ ನಾಲ್ಕು  ದಿನಗಳಲ್ಲಿ ಕರ್ನಾಟಕ ಸರ್ಕಾರದ ನಿಯೋಗ ವಿವಿಧ ಅಂತಾರಾಷ್ಟ್ರೀಯ ನಿಯೋಗಗಳ ಜೊತೆ ಪರಸ್ಪರ  ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ವಿಶ್ವದ ಪ್ರಮುಖ ಕಂಪನಿಗಳ  ಮುಖ್ಯಸ್ಥರಿಗೆ ಸುಮಾರು 200 ನಿವೇದನೆಗಳನ್ನು ಕಳುಹಿಸಲಾಗಿದೆ. ಇಲ್ಲಿಯವರೆಗೆ 9  ಸಂಸ್ಥೆಗಳು ಮುಖ್ಯಮಂತ್ರಿಯವರನ್ನು ಭೇಟಿಯಾಗುವುದಾಗಿ ಖಚಿತಪಡಿಸಿದ್ದಾರೆ ಎಂದರು.

ಮುಂಬರುವ ನವೆಂಬರ್ 3,4ರಂದು ಜಾಗತಿಕ ಹೂಡಿಕೆದಾರರ ಸಮಾವೇಶ ಕರ್ನಾಟಕ 2020 ನಡೆಯಲಿದ್ದು, ಇದಕ್ಕಾಗಿ  ಪೂರ್ವಭಾವಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ   ಭಾಗವಹಿಸುವಂತೆ ವಿಶ್ವದ  ಪ್ರಮುಖ ಕಂಪನಿಗಳ ಮುಖ್ಯಸ್ಥರಿಗೆ ಆಹ್ವಾನ ನೀಡಲಾಗಿದೆ ಎಂದು  ಶೆಟ್ಟರ್ ತಿಳಿಸಿದರು.

ಮೈತ್ರಿ ಸರ್ಕಾರದಲ್ಲಿ ಜಿಂದಾಲ್ ಗೆ ಭೂಮಿ ಪರಭಾರೆ ಸಂಬಂಧ  ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಭೂಮಿ ಪರಭಾರೆ ಸಂಬಂಧ ವಿಭಿನ್ನ ಅಭಿಪ್ರಾಯಗಳು  ವ್ಯಕ್ತವಾಗಿವೆ. ಈ ಬಗ್ಗೆ ಕಾನೂನು ಸಲಹೆ ಪಡೆಯಲಾಗಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ,  ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ ಬಳಿಕ ಸರ್ಕಾರ ಸ್ಪಷ್ಟ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

ಈ ಬಗ್ಗೆ ಹೆಚ್ಚಿಗೆ ಮಾತನಾಡಲು ಇಚ್ಛಿಸದ ಅವರು, ಭೂಮಿ ಈಗಲೂ ಜಿಂದಾಲ್  ಕಂಪನಿಯ ಕಬ್ಜಾದಲ್ಲಿಯೆ ಇದೆ. ಅದನ್ನು ತಡೆಯುವ ಪ್ರಶ್ನೆಯೇ ಇಲ್ಲ. ಆದರೆ ಭೂಮಿ ಪರಭಾರೆಯ  ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp