ಪೊಲೀಸ್ ವರ್ಗಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಮಾಡಲ್ಲ ಎಂದು ಪ್ರಮಾಣಪತ್ರ ಸಲ್ಲಿಸಿ; ಹೈಕೋರ್ಟ್

ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಪರಿಗಣಿಸುವುದಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಪರಿಗಣಿಸುವುದಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.

ಪೊಲೀಸರ ವರ್ಗಾವಣೆಯಲ್ಲಿ ಜನಪ್ರತಿನಿಧಿಗಳ ಹಸ್ತಕ್ಷೇಪ ಪ್ರಶ್ನಿಸಿ ವಿ.ಶಶಿಧರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ನೇತೃತ್ವದ ವಿಭಾಗೀಯ ಪೀಠ ಗುರುವಾರ ಈ ಆದೇಶ ನೀಡಿತು.

ಪೊಲೀಸರ ವರ್ಗಾವಣೆಯಲ್ಲಿ ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡಬಾರದು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ತೀರ್ಪು ನೀಡಿದೆ.

ಆದ್ದರಿಂದ ಪೊಲೀಸರ ವರ್ಗಾವಣೆಗೆ ಜನಪ್ರತಿನಿಧಿಗಳ ಶಿಫಾರಸು ಪತ್ರಗಳನ್ನು ಪರಿಗಣಿಸುವುದಿಲ್ಲ ಎಂದು ಸರ್ಕಾರ ಹೇಳಿಕೆ ನೀಡಬೇಕು ಎಂದು ಸೂಚಿಸಿತು.

ಕಾನೂನು ಪ್ರಕಾರವೇ ವರ್ಗಾವಣೆ ಮಾಡಲಾಗುತ್ತಿದೆ. ನಿಯಮಗಳನ್ನು ಉಲ್ಲಂಘಿಸುತ್ತಿಲ್ಲ’ ಎಂಬ ಗೃಹ ಇಲಾಖೆಯ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಅದನ್ನು ಪರಿಶೀಲಿಸಿದ ನ್ಯಾಯಪೀಠ, ‘ಸುಪ್ರೀಂಕೋರ್ಟ್‌ ತೀರ್ಪಿನ ನಂತರವೂ ಜನಪ್ರತಿನಿಧಿಗಳ ಶಿಫಾರಸುಗಳಿಗೆ ಬೆಲೆಯಿದೆಯೇ? ಇಂತಹ ಶಿಫಾರಸುಗಳನ್ನು ನಿರ್ಲಕ್ಷಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪೊಲೀಸ್‌ ಎಸ್ಟಾಬ್ಲಿಷ್‌ಮೆಂಟ್‌ ಬೋರ್ಡ್‌ ಸ್ಪಷ್ಟನೆ ನೀಡಬೇಕಾಗುತ್ತದೆ’ ಎಂದು ಹೇಳಿತು. ಅಲ್ಲದೆ, ಆ ಬಗ್ಗೆ ಸ್ಪಷ್ಟ ಪ್ರಮಾಣಪತ್ರ ಸಲ್ಲಿಸಲು ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಜ. 24 ಕ್ಕೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com