ಬೆಂಗಳೂರು: ವಿಶ್ವೇಶ ತೀರ್ಥ ಶ್ರೀಗಳ ಬೃಂದಾವನಕ್ಕೆ ಭೇಟಿ ನೀಡಿದ ಅಮಿತ್ ಶಾ 

ಇತ್ತೀಚಿಗೆ ನಿಧನರಾದ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯ ವಿದ್ಯಾಪೀಠದಲ್ಲಿರುವ ಬೃಂದಾವನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಭೇಟಿ ನೀಡಿದರು.

Published: 18th January 2020 04:22 PM  |   Last Updated: 18th January 2020 04:27 PM   |  A+A-


Amitsha1

ವಿಶ್ವೇಶತೀರ್ಥ ಸ್ವಾಮೀಜಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಅಮಿತ್ ಶಾ

Posted By : Nagaraja AB
Source : ANI

ಬೆಂಗಳೂರು: ಇತ್ತೀಚಿಗೆ ನಿಧನರಾದ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯ ವಿದ್ಯಾಪೀಠದಲ್ಲಿರುವ ಬೃಂದಾವನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಭೇಟಿ ನೀಡಿದರು.

ಅರಮನೆ ಮೈದಾನದಲ್ಲಿ ವೇದಾಂತ ಭಾರತಿ ಸಂಸ್ಥೆ ಆಯೋಜಿಸಿದ್ದ ವಿವೇಕ ದೀಪಿನಿ ಮಹಾ ಸಮರ್ಪಣೆ ಕಾರ್ಯಕ್ರಮ ಮುಗಿಸಿಕೊಂಡ ನಂತರ ನಿಗದಿಯಾಗಿದ್ದರೂ ಬೃಂದಾವನಕ್ಕೆ ಭೇಟಿ ನೀಡಿ, ಪೇಜಾವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ನಂತರ ಜಯನಗರ ನಾಲ್ಕನೇ ಬ್ಲಾಕ್ ನಲ್ಲಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ನೂತನ ಕಚೇರಿಯನ್ನು ಅಮಿತ್ ಶಾ ಉದ್ಘಾಟಿಸಿದರು.

ಸಾರ್ವಜನಿಕರ ಕುಂದು ಕೊರತೆ ಸ್ವೀಕಾರ ಸೇರಿದಂತೆ ಮತ್ತಿತರ ಕಾರ್ಯಗಳಿಗೆ ಅನುಕೂಲಕ್ಕಾಗಿ ತೇಜಸ್ವಿ ಸೂರ್ಯ ನೂತನ ಕಚೇರಿಯನ್ನು ಸ್ಥಾಪಿಸಿದ್ದು, ಉದ್ಘಾಟನಾ ಕಾರ್ಯಕ್ರಮದ ವೇಳೆ ಪಾಲ್ಗೊಂಡ ಆದಿ ಚುಂಚನಗಿರಿ ಮಠಾಧೀಶ ನಿರ್ಮಲಾನಂದ ನಾಥ ಸ್ವಾಮೀಜಿ, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಯಿತು.

ಬಳಿಕ ಹೆಚ್ ಎಎಲ್ ಗೆ ತೆರಳಿದ ಅಮಿತ್ ಶಾ, ವಿಶೇಷ  ಹೆಲಿಕಾಪ್ಟರ್ ಮೂಲಕ ಹುಬ್ಬಳಿಯಲ್ಲಿ ಆಯೋಜಿಸಲಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜನಜಾಗೃತಿ ಕಾರ್ಯಕ್ರಮಕ್ಕೆ ಪ್ರಯಾಣಿಸಿದರು.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp