ಶಿವಮೊಗ್ಗದಲ್ಲಿ ಮಂಗನ ಜ್ವರ ಪ್ರಯೋಗಾಲಯ ಸ್ಥಾಪನೆ: ಆರೋಗ್ಯ ಸಚಿವ ಶ್ರೀರಾಮುಲು 

ಶಿವಮೊಗ್ಗದಲ್ಲಿ ಮಂಗನ ಜ್ವರ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು; ಶಿವಮೊಗ್ಗದಲ್ಲಿ ಮಂಗನ ಜ್ವರ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.


ರಾಜ್ಯದಲ್ಲಿ ಮಂಗನ ಜ್ವರ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಡಿಮೆಯಾಗಿದ್ದು ಜ್ವರ ಕಾಣಿಸಿಕೊಂಡರೆ ಸಾಕಷ್ಟು ಪ್ರಮಾಣದಲ್ಲಿ ಔಷಧ ಸಂಗ್ರಹಿಸಿಡುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.


ಆಯುಷ್ಮಾನ್ ಭಾರತ್ ಕಾರ್ಡು: ರಾಜ್ಯದ 400 ಸರ್ಕಾರಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಸೌಲಭ್ಯಗಳಿದ್ದು 3 ಸಾವಿರ ಆಸ್ಪತ್ರೆಗಳಲ್ಲಿ ಸೇರಿಸಲು ಗುರುತಿಸಲಾಗಿದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಮತ್ತು ಗ್ರಾಮ ಪಂಚಾಯ್ತಿ ಕಚೇರಿಗಳಲ್ಲಿ ಆಯುಷ್ಮಾನ್ ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ರಾಜ್ಯದ 4.40 ಕೋಟಿ ಜನರಲ್ಲಿ ಬಿಪಿಎಲ್ ಕಾರ್ಡು ಇದ್ದು ಅವರಲ್ಲಿ 1 ಕೋಟಿ ಜನರು ಈಗಾಗಲೇ ಆಯುಷ್ಮಾನ್ ಕಾರ್ಡುಗಳನ್ನು ನೀಡಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹೆಚ್ಚು ಆಯುಷ್ಮಾನ್ ಕಾರ್ಡುಗಳನ್ನು ವಿತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.


ನಾಳೆಯಿಂದ ಪೋಲಿಯೊ ಅಭಿಯಾನ: ಆರೋಗ್ಯ ಇಲಾಖೆ 33 ಸಾವಿರದ 021 ಪೊಲೀಯೊ ಬೂತ್ ಗಳನ್ನು ತೆರೆದಿದ್ದು ನಾಳೆ 64.65 ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com