ಸಂಘಟನೆಗಳನ್ನು ನಿಷೇಧಿಸುವಂತೆ ಸಿಎಂಗೆ ತೇಜಸ್ವಿ ಸೂರ್ಯ ಮನವಿ

ರಾಜ್ಯ ಸರ್ಕಾರವು ಪಿಎಫ್ಐ ಹಾಗೂ ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

Published: 18th January 2020 12:14 PM  |   Last Updated: 18th January 2020 12:14 PM   |  A+A-


Tejaswi surya

ತೇಜಸ್ವಿ ಸೂರ್ಯ

Posted By : Manjula VN
Source : UNI

ಬೆಂಗಳೂರು: ರಾಜ್ಯ ಸರ್ಕಾರವು ಪಿಎಫ್ಐ ಹಾಗೂ ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿಂದು ಪಿಎಫ್ಐ ಹಾಗೂ ಎಸ್​ಡಿಪಿಐ ಸಂಘಟನೆಯನ್ನು ನಿಷೇಧಿಸುವ ವಿಚಾರವಾಗಿ ಭೇಟಿಯಾದ ಅವರು, ಆದಷ್ಟು ಬೇಗ ಈ ಎರಡು ಸಂಘಟನೆಗಳಿಗೆ ನಿಷೇಧ ಹೇರಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಮನವಿ ಮಾಡಿದರು.

ಸಿಎಎ ಪರವಾಗಿ ಡಿ.22ರಂದು ನಗರದ ಟೌನ್​ ಹಾಲ್​ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಇಂಡಿಯಾ ಫಾರ್‌ ಸಿಎಎ ಪ್ರತಿಭಟನೆಯಲ್ಲಿ ಕಾರ್ಯಕರ್ತ ವರುಣ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದಡಿ ಎಸ್​ಡಿಪಿಐ ಪಕ್ಷದ ಆರು ಕಾರ್ಯಕರ್ತರನ್ನು ನಿನ್ನೆ ಬೆಂಗಳೂರಿನ ಪೊಲೀಸರು ಬಂಧಿಸಿದ್ದರು.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp