ಇಂದು ಸಿದ್ದಗಂಗಾ ಶ್ರೀ ಡಾ.ಶಿವಕುಮಾರ್ ಸ್ವಾಮೀಜಿ ಅವರ ಪುಣ್ಯಸ್ಮರಣೆ

ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯ ಪ್ರಥಮ ಪುಣ್ಯ ಸ್ಮರಣೋತ್ಸವ ನಾಳೆ ನಡೆಯಲಿದ್ದು.ಇದಕ್ಕಾಗಿ ಭರದಿಂದ ಸಿದ್ಧತೆಗಳು ಸಾಗಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯ ಪ್ರಥಮ ಪುಣ್ಯ ಸ್ಮರಣೋತ್ಸವ ನಾಳೆ ನಡೆಯಲಿದ್ದು.ಇದಕ್ಕಾಗಿ ಭರದಿಂದ ಸಿದ್ಧತೆಗಳು ಸಾಗಿವೆ. 

ಹಾಲಿ- ಮಾಜಿ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಡೆದಾಡುವ ದೇವರು, ಕಾಯಕ ಯೋಗಿ, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿ ನಾಳೆಗೆ ಒಂದು ವರ್ಷ. ನಾಳೆ ಪ್ರಥಮ ಪುಣ್ಯ ಸಂಸ್ಮರ ಣೋತ್ಸವ ನಡೆಯಲಿದ್ದು, ಮಠದಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಮುಂಜಾನೆಯಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. 

10.30ಕ್ಕೆ ವೇದಿಕೆ ಕಾರ್ಯಕ್ರಮ ಶುರುವಾಗಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ, ಸುತ್ತೂರು ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು, ಸಾಧು-ಸಂತರು ಭಾಗವಹಿಸಲಿದ್ದಾರೆ. 

ಶ್ರೀಗಳು ಶಿವೈಕ್ಯರಾದ ಜ. 21ರಂದು ತುಮಕೂರು ಸೇರಿದಂತೆ ನಾಡಿನ ಹಲವೆಡೆ ಪುಣ್ಯ ಸ್ಮರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಠದ ಆವರಣದಲ್ಲಿ ಭಾನುವಾರ (ಎರಡು ದಿನ ಮೊದಲು) ಶ್ರೀಗಳ ಮೊದಲ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮ ಬೃಹತ್‌ ಪ್ರಮಾಣದಲ್ಲಿ ನಡೆಯಲಿದೆ. ಅನ್ನ ದಾಸೋಹಕ್ಕೆ ಶ್ರೀಗಳು ಕೊಟ್ಟಿದ್ದ ಪ್ರಾಮುಖ್ಯವನ್ನು ಅರಿತಿರುವ ಭಕ್ತರು ಸಾಧ್ಯವಾದ ಕಡೆಗಳಲ್ಲೆಲ್ಲ ಅನ್ನ ದಾಸೋಹ ಏರ್ಪಡಿಸುತ್ತಿದ್ದಾರೆ. ಮಠದಲ್ಲಿನ ನಿತ್ಯ ದಾಸೋಹಕ್ಕಾಗಿ ವಿಶೇಷವಾಗಿ ಉತ್ತರ ಕರ್ನಾಟಕದ ಜನರು ಹೆಚ್ಚಿನ ಪ್ರಮಾಣದಲ್ಲಿ ದವಸ ಧಾನ್ಯಗಳನ್ನು ಕಳುಹಿಸಿಕೊಡುತ್ತಿದ್ದಾರೆ. ನಾಡಿನ ಉದ್ದಗಲಕ್ಕೂ ಶ್ರೀಗಳ ಹೆಸರಿನಲ್ಲಿ ಒಂದಲ್ಲ ಒಂದು ಸೇವಾ ಕಾರ್ಯಗಳು ನಡೆಯುತ್ತಿವೆ. ರಸ್ತೆ, ವೃತ್ತ, ಬಡಾವಣೆಗಳಿಗೆ ಶ್ರೀಗಳ ಹೆಸರಿನ್ನಿಟ್ಟು ಗೌರವ ಸಮರ್ಪಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com