ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ:  ಪೊಲೀಸ್ ಬಿಗಿ ಬಂದೋಬಸ್ತ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದೆ. ಅನುಮಾನ ಹಿನ್ನೆಲೆ ಬಾಂಬ್ ಸ್ಕ್ವಾಡ್ ತಂಡದಿಂದ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ.
ಮಂಗಳೂರಿನಲ್ಲಿ ಬಿಗಿ ಭದ್ರತೆ
ಮಂಗಳೂರಿನಲ್ಲಿ ಬಿಗಿ ಭದ್ರತೆ

ಮಂಗಳೂರು:  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದೆ. ಅನುಮಾನ ಹಿನ್ನೆಲೆ ಬಾಂಬ್ ಸ್ಕ್ವಾಡ್ ತಂಡದಿಂದ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ.

ಮಂಗಳೂರಿನ ಬಜ್ಪೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಸುಮಾರು 10 ಗಂಟೆಗೆ ಲ್ಯಾಪ್ ಟ್ಯಾಪ್ ಬ್ಯಾಗೊಂದು ಅನುಮಾನಸ್ಪದವಾಗಿ ಪತ್ತೆಯಾಗಿತ್ತು. ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಹತ್ತಿರ ಇದು ಪತ್ತೆಯಾಗಿತ್ತು.

ಬಾಂಬ್ ಪತ್ತೆಯಾದ ಕೂಡಲೇ ಎಚ್ಚೆತ್ತ ಸಿಬ್ಬಂದಿ, ವಿಮಾನ ನಿಲ್ದಾಣದಲ್ಲಿನ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ.

ಬಾಂಬ್ ಇರಿಸಲಾಗಿದ್ದ ಬ್ಯಾಗ್ ನ್ನು ನಿಲ್ದಾಣದ ಆವರಣದ ಹೊರಗೆ ತರಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಿಐಎಸ್‍ಎಫ್ ಭದ್ರತಾ ಪಡೆ ನಿಲ್ದಾಣದ ಸುತ್ತಲೂ ಬಿಗಿ ಬಂದೋಬಸ್ತ್ ಕೈಗೊಂಡಿದೆ.

ವಿಮಾನ ನಿಲ್ದಾಣದಿಂದ ಸುಮಾರು 500 ಮೀಟರ್ ನಷ್ಟು ದೂರದಲ್ಲಿ ಇದನ್ನು ಇರಿಸಲಾಗಿದ್ದು, ಈ ಭಾಗಕ್ಕೆ ಯಾರಿಗೂ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ.

ಪ್ರಯಾಣಿಕರ ಸುರಕ್ಷಿತೆಯ ದೃಷ್ಟಿಯಿಂದ ವಿಮಾನ ನಿಲ್ದಾಣಕ್ಕೆ ಬರುವ ದಾರಿಯನ್ನು ಬದಲಾವಣೆ ಮಾಡಲಾಗಿದೆ.

ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ವಿಮಾನ ಸಂಚಾರ ಎಂದಿನಂತೆ ನಡೆಯುತ್ತಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com