ಮಂಡ್ಯ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಮಹಿಳೆ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಡ್ಯ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಜಾಗೃತಿ ಚಿತ್ರ ಕಲಾವಿದ ಗೋವಿಂದು ಅವರ ಪತ್ನಿ ಸುಶೀಲಮ್ಮ(೪೩) ಮೃತಪಟ್ಟ ಮಹಿಳೆಯಾಗಿದ್ದಾರೆ. 

ಕಳೆದ ಮೂರು ದಿನಗಳ ಹಿಂದೆ ಕೆಸ್ತೂರು ಗ್ರಾಮಕ್ಕೆ ಆಗಮಿಸಿ ಸ್ವಗ್ರಾಮ ತೂಬಿನಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ
ತುಮಕೂರು ಕಡೆಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿಯೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟುಬಿದ್ದು ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣ ಸುಶೀಲಮ್ಮ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com