ಕ್ರಿಕೆಟ್ ಅಭಿಮಾನಿಗಳಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 50 ಸಾವಿರ ದಂಡ ವಿಧಿಸಿದ ಬಿಬಿಎಂಪಿ!

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಭರ್ಜರಿ ಗೆಲುವು ಸಾಧಿಸಿ, ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಇದೀಗ ಬಿಬಿಎಂಪಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ಸಿಎ)ಗೆ 50 ಸಾವಿರ ರುಪಾಯಿ ದಂಡ ವಿಧಿಸಿದೆ. 
ಟೀಂ ಇಂಡಿಯಾ
ಟೀಂ ಇಂಡಿಯಾ

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಭರ್ಜರಿ ಗೆಲುವು ಸಾಧಿಸಿ, ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಇದೀಗ ಬಿಬಿಎಂಪಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ಸಿಎ)ಗೆ 50 ಸಾವಿರ ರುಪಾಯಿ ದಂಡ ವಿಧಿಸಿದೆ. 

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಅಭಿಮಾನಿಗಳು ಪ್ಲಾಸ್ಟಿಕ್ ಬಳಸಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೆಎಸ್ ಸಿಎಗೆ ದಂಡ ವಿಧಿಸಿದೆ. 

ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧವಿದ್ದರೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿರುವಾಗಲೇ ಪ್ಲಾಸ್ಟಿಕ್ ಕಪ್, ಬ್ಯಾನರ್ ಬಳಸಿರುವುದು ಆರೋಗ್ಯಾಧಿಕಾರಿಗಳ ತಪಾಸಣೆ ವೇಳೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದ್ದು ಮತ್ತೆ ಇದು ಮರುಕಳಿಸದಂತೆ ಎಚ್ಚರಿಕೆಯನ್ನು ನೀಡಲಾಗಿದೆ. 

ಕೆಎಸ್ಸಿಎಗೆ ದಂಡ ವಿಧಿಸಿರುವ ಕುರಿತು ಬಿಬಿಎಂಪಿ ಆಯುಕ್ತರಾದ ಬಿ ಹೆಚ್ ಅನಿಲ್ ಕುಮಾರ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ತಿಳಿಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com