ಸಂತ್ರಸ್ತರಿಗೆ ಪರಿಹಾರ ನೀಡಲು ವಿಫಲ: ತನ್ನ ಆದೇಶ ಪಾಲಿಸದೇ ಸಭೆ ನಡೆಸಿದ್ದ ಬಿಬಿಎಂಪಿ ಆಯುಕ್ತರ ವಿರುದ್ಧ 'ಹೈ' ಕಿಡಿ

ನಗರದ ರಸ್ತೆ ಗುಂಡಿಗಳಿಂದ ಸಂಭವಿಸಿದ ಅಪಘಾತಗಳ ಸಂತ್ರಸ್ತರಿಗೆ ಪರಿಹಾರ ನೀಡಲು ನಿರ್ದೇಶಿಸಿ ತಾನು ಹೊರಡಿಸಿದ್ದ ಆದೇಶ ಪಾಲಿಸದೆಯೇ, ರಾಜಕಾರಣಿಗಳೊಂದಿಗೆ ಚರ್ಚಿಸಿ, ಆದೇಶವನ್ನು ಕೌನ್ಸಿಲ್ ಸಭೆ ಮುಂದಿಡಲು ನಿರ್ಣಯ ಕೈಗೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರನ್ನು ಹೈಕೋರ್ಟ್ ಸೋಮವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತ್ತು. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ರಸ್ತೆ ಗುಂಡಿಗಳಿಂದ ಸಂಭವಿಸಿದ ಅಪಘಾತಗಳ ಸಂತ್ರಸ್ತರಿಗೆ ಪರಿಹಾರ ನೀಡಲು ನಿರ್ದೇಶಿಸಿ ತಾನು ಹೊರಡಿಸಿದ್ದ ಆದೇಶ ಪಾಲಿಸದೆಯೇ, ರಾಜಕಾರಣಿಗಳೊಂದಿಗೆ ಚರ್ಚಿಸಿ, ಆದೇಶವನ್ನು ಕೌನ್ಸಿಲ್ ಸಭೆ ಮುಂದಿಡಲು ನಿರ್ಣಯ ಕೈಗೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರನ್ನು ಹೈಕೋರ್ಟ್ ಸೋಮವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತ್ತು. 

ರಾಜಕಾರಣಿಗಳೊಂದಿಗೆ ಯಾರೆ ಸಭೆ ನಡೆಸಲಾಯಿತು. ಅದರ ಉದ್ದೇಶವೇನು? ಸಭೆಯಲ್ಲಿ ಭಾಗವಿಸಿದ್ದ ಜನಪ್ರತಿನಿಧಿಗಳ ಹೆಸರು ಮತ್ತು ವಿಳಾಸದ ವಿವರಗಳನ್ನು ಜ.30ರೊಳಗೆ ಒದಗಿಸಬೇಕು. ಅದನ್ನು ಪರಿಗಣಿಸಿ ನ್ಯಾಯಾಲಯ ಆದೇಶ ಉಲ್ಲಂಘಿಸಿದವರ ವಿರುದ್ಧ ನ್ಯಾಯಾಲಂಗ ನಿಂದನೆ ನೋಟಿಸ್ ಜಾರಿ ಮಾಡಲಾಗುತ್ತದೆ ಂದು ಹೈಕೋರ್ಟ್ ತಾಕೀತು ಮಾಡಿದೆ. 

ನಗರದ ರಸ್ತೆಗಳು ಗುಂಡಿಯಿಂದ ಹದಗೆಟ್ಟಿವೆ ಎಂದು ಆರೋಪಿಸಿ ಕೋರಮಂಗಲದ ವಿಜಯ್ ಮೆನನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸೋಮವಾರ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. 

ನಗರದ ರಸ್ತೆ ಗುಂಡಿಗಳಿಂದ ಉಂಟಾದ ಅಪಘಾತಗಳ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಈ ಸಂಬಂಧ ಜಾಹೀರಾತು ಪ್ರಕಟಣೆ ನೀಡಬೇಕು ಎಂದು ಕಳೆದ 2019ರ ಸೆಪ್ಟೆಂಬರ್ ತಿಂಗಳಿಲ್ಲಿ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಬಿಎಂಪಿ ಸುಪ್ರೀಂಕೋರ್ಟ್ ಗೆ ವಿಶೇಷ ಮೇಲ್ಮನವಿ ಸಲ್ಲಿಸಿತತು. ಅದನ್ನು 2020ರ ಜ.9ರಂದು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಇದಾದ ಬಳಿಕವೂ ಹೈಕೋರ್ಟ್ ಆದೇಶ ಜಾರಿಗೆ ಬಿಬಿಎಂಪಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬದಲಾಗಿ ಬಿಬಿಎಂಪಿ ಆಯುಕ್ತರು, ಮೇಯರ್ ಹಾಗೂ ಉಪಮೇಯರ್ ಸೇರಿದಂತೆ ಇತರೆ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದರು. ಬಳಿಕ ನ್ಯಾಯಾಲಯದ ಆದೇಶಗ ಬಗ್ಗೆ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಲು ನಿರ್ಣಯಗೊಂಡಿದ್ದರು. 

ಸೋಮವಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ, ಸುಪ್ರೀಂಕೋರ್ಟ್ ಮೇಲ್ಮನವಿಯನ್ನು ವಜಾಗೊಳಿಸಿದ ನಂತರವೂ ಹೈಕೋರ್ಟ್ ಆದೇಶ ಜಾರಿಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಕನಿಷ್ಟ ಪಕ್ಷ ನ್ಯಾಯಾಲಯಕ್ಕೆ ಕ್ಷಮೆ ಕೋರುವ ಸೌಜನ್ಯವೂ ಇಲ್ಲ. ಮುಖ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡುವುದು ಬಿಬಿಎಂಪಿಯ ಕರ್ತವ್ಯ. ಅದು ಬಿಟ್ಟು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದಿ ಟೀಕಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com