ಅಮೆರಿಕಾ ಅಧ್ಯಕ್ಷ  ಟ್ರಂಪ್ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಯಡಿಯೂರಪ್ಪ

ಸ್ವಿಟ್ಜರ್ಲೆಂಡಿನ ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೇ ದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮಾವೇಶದ ಅತ್ಯಂತ ಮಹತ್ವದ ಕಾರ್ಯಕ್ರಮವಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ರಾಜ್ಯದ ಮುಖ್ಯಮಂತ್ರಿಯೊಬ್ಬರು ಅಮೆರಿಕಾ ಅಧ್ಯಕ್ಷರ ಭಾಷಣದಲ್ಲಿ ಪಾಲ್ಗೊಂಡಿರುವುದು ಇದ

Published: 21st January 2020 11:10 PM  |   Last Updated: 21st January 2020 11:10 PM   |  A+A-


ಅಮೆರಿಕಾ ಅಧ್ಯಕ್ಷ ಟ್ರಂಪ್ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಯಡಿಯೂರಪ್ಪ

Posted By : Raghavendra Adiga
Source : UNI

ದಾವೊಸ್:  ಸ್ವಿಟ್ಜರ್ಲೆಂಡಿನ ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೇ ದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮಾವೇಶದ ಅತ್ಯಂತ ಮಹತ್ವದ ಕಾರ್ಯಕ್ರಮವಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ರಾಜ್ಯದ ಮುಖ್ಯಮಂತ್ರಿಯೊಬ್ಬರು ಅಮೆರಿಕಾ ಅಧ್ಯಕ್ಷರ ಭಾಷಣದಲ್ಲಿ ಪಾಲ್ಗೊಂಡಿರುವುದು ಇದೇ ಮೊದಲು ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರನ್ನು ಒಳಗೊಂಡಂತೆ ಪೂರ್ಣ ಪ್ರಮಾಣದ ನಿಯೋಗದೊಂದಿಗೆ ಪಾಲ್ಗೊಂಡ ಮೊದಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಿದ್ದಾರೆ, 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಆ ಸಂದರ್ಭದಲ್ಲಿ ಅಮೆರಿಕಾ ಸರ್ಕಾರದ ಕಾರ್ಯದರ್ಶಿ ಸಮಾವೇಶದಲ್ಲಿ ಭಾಗವಹಿಸಿದ್ದರು.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯುಷ್ ಗೋಯೆಲ್, ಕೇಂದ್ರ ಹಡಗು ಸಾರಿಗೆ ಖಾತೆ ರಾಜ್ಯ ಸಚಿವ ಮನ್ ಸುಖ್ ಮಾಂಡವೀಯ ಅವರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ಅಧ್ಯಕ್ಷರ ಭಾಷಣದ ನಂತರ ಮಾತನಾಡಿದ ಸಿಎಂ "ಅಮೆರಿಕಾ ಅಧ್ಯಕ್ಷರ ಭಾಷಣ ಸರಿಯಾದ ದಿಕ್ಕಿನಲ್ಲಿತ್ತು ಆದರೆ ಅವರು ಅಮೆರಿಕಾದ ಬಗೆಗೆ ಮಾತ್ರ ಹೆಚ್ಚು ಒತ್ತುಕೊಟ್ಟು ಮಾತನಾಡಿದ್ದಾರೆ. ಯಾವುದ್ ರಾಷ್ಟ್ರದ ಅಧ್ಯಕ್ಷರಲ್ಲಿ ಇದು ಸಹಜವಾದದ್ದಾಗಿದೆ" ಎಂದಿದ್ದಾರೆ. ಅಲ್ಲದೆ ಇಂತಹಾ ಜಾಗತಿಕ ವೇದಿಕೆಗಳು ಕರ್ನಾಟಕದತಹಾ ರಾಜ್ಯಕ್ಕೆ ಅತ್ಯಂತ ಮಹತ್ವದ್ದಾಗಿದೆಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗುತದೆ. ಉದ್ಯೋಗ ಸೃಷ್ಟಿ ನಮ್ಮ ಗುರಿಯಾಗಿರುವ ಕಾರಣ ಅದಕ್ಕೆ ಅಗತ್ಯವಾದ ಹೂಡಿಕೆಯೂ ಬೇಕು. ಇಂತಹಾ ಅವಕಾಶ ರಾಜ್ಯದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಕಾರ್ಯಕ್ರಮದ ನಂತರಸಿಎಂ ಯಡಿಯೂರಪ್ಪ , ದಾವೊಸ್ ನ ಕರ್ನಾಟಕ ಪೆವಿಲಿಯನ್ ನಲ್ಲಿ ರಿನ್ಯೂ ಪವರ್ ಲಿಮಿಟೆಡ್ ಸಂಸ್ಥೆಯ ಸಿಇಒ ಸಮಂತ್ ಸಿನ್ಹಾ ಅವರೊಂದಿಗೆ ಚರ್ಚಿಸಿದರು. ಅಲ್ಲದೆ ಅವರು, ದಾವೊಸ್ ನ ಕರ್ನಾಟಕ ಪೆವಿಲಿಯನ್ ನಲ್ಲಿ ಇಂದು 2000 ವ್ಯಾಟ್ ಕಂಪೆನಿಯ ಪ್ರತಿನಿಧಿಗಳೊಂದಿಗೆ ಸ್ಮಾರ್ಟ್ ಸಿಟಿ ಯೋಜನೆಗಳು ಮತ್ತು ಫುಡ್ ಕ್ಲಸ್ಟರ್ ಸ್ಥಾಪನೆ ಕುರಿತು ಚರ್ಚಿಸಿದರು. ಹಾಗೆಯೇ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದ ಕರ್ನಾಟಕ ಪೆವಿಲಿಯನ್ ನಲ್ಲಿ ವೋಲ್ವೋ ಕಂಪೆನಿ ಅಧ್ಯಕ್ಷ ಹಂಕಾ ಅಂಗ್ವೆಲ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಎಲ್ಲಾ ಸಮಯದಲ್ಲಿ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಉಗಳಿಗೆ ಸಾಥ್ ನೀಡಿದ್ದರು.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp