ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ಸೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಗುಯಿಲಾಳು ಟೋಲ್ ಬಳಿಯ ಗಿಡ್ಡೋಬನಹಳ್ಳಿ ಬಳಿ ನಡೆದಿದ್ದು, ಅದೃಶ್ಯವಶಾತ್ ಯಾರಿಗೂ ಹಾನಿಯಾಗಿಲ್ಲ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ಸೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಗುಯಿಲಾಳು ಟೋಲ್ ಬಳಿಯ ಗಿಡ್ಡೋಬನಹಳ್ಳಿ ಬಳಿ ನಡೆದಿದ್ದು, ಅದೃಶ್ಯವಶಾತ್ ಯಾರಿಗೂ ಹಾನಿಯಾಗಿಲ್ಲ.

ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಹಿಂದಿನಿಂದ ಬರುತ್ತಿದ್ದ ವಾಹನದ ಚಾಲಕರು ಈ ವಿಷಯವನ್ನು ಬಸ್ ಚಾಲಕನಿಗೆ ತಿಳಿಸಿದ್ದಾರೆ. ತಕ್ಷಣ ಬಸ್ ಚಾಲಕ ಬಸ್​ ನಿಲ್ಲಿಸಿ, ಪ್ರಯಾಣಿಕರನ್ನು ಕೆಳಗಿಳಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರಯಾಣಿಕರ ಜೀವ ಉಳಿದಿದೆ.

ಬಸ್ಸು ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕೆ ಎಸ್ ಅರ್ ಟಿಸಿ ಹವಾ ನಿಯಂತ್ರಿತ ಬಸ್ ಇದಾಗಿದ್ದು, ಬಸ್ ನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದರು. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. 

ಆದರೆ ಅಷ್ಟರಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com