ಹಾಸನ: ಬಸ್ ನಿಲ್ದಾಣದಲ್ಲಿ ಗನ್, ಮಾರಕಾಸ್ತ್ರವಿದ್ದ ಬ್ಯಾಗ್ ಹಿಡಿದು ತಿರುಗಾಡುತ್ತಿದ್ದ ಉತ್ತರ ಭಾರತದವರನ್ನು ಬಂಧಿಸಿದ ಪೊಲೀಸರು!

ಬ್ಯಾಗ್ ಹಿಡಿದು ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 

Published: 21st January 2020 03:56 PM  |   Last Updated: 21st January 2020 03:56 PM   |  A+A-


Arrest

ಬಂಧನ

Posted By : Vishwanath S
Source : The New Indian Express

ಹಾಸನ: ಬ್ಯಾಗ್ ಹಿಡಿದು ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 

ಬಂಧಿತರನ್ನು ಉತ್ತರ ಭಾರತದವರು ಎಂದು ತಿಳಿದುಬಂದಿದ್ದು ಅವರ ಬಳಿಯಿದ್ದ ಬ್ಯಾಗ್ ನಲ್ಲಿ ರಿವಾಲ್ವರ್ ಮತ್ತು ಮಾರಕಾಸ್ತ್ರಗಳಿದ್ದದ್ದನ್ನು ಗಮನಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ಬಸ್ ನಿಲ್ದಾಣದಲ್ಲಿ ಇವರಿಬ್ಬರು ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. 

ಇವರಿಬ್ಬರು ಕೊಲೆ ಪ್ರಕರಣದಲ್ಲಿ ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದುದ ಈ ನಿಟ್ಟಿನಲ್ಲಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್ ಪಿ ರಾಮ್ ನಿವಾಸ್ ಸೇಪಟ್ ತಿಳಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp