ಮಂಗಳೂರು ಬಾಂಬ್ ಪ್ರಕರಣ: ತನಿಖೆ ಚುರುಕುಗೊಳಿಸಿದ ಪೊಲೀಸರು, ಆಟೋ ಚಾಲಕನ ವಿಚಾರಣೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬೆನ್ನುಬಿದ್ದಿರುವ ಪೊಲೀಸರು ಕರಾವಳಿ ಜಿಲ್ಲೆಗಳನ್ನೇ ಮುಖ್ಯವಾಗಿಟ್ಟುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. 
ಮಂಗಳೂರು ಪೊಲೀಸ್
ಮಂಗಳೂರು ಪೊಲೀಸ್

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬೆನ್ನುಬಿದ್ದಿರುವ ಪೊಲೀಸರು ಕರಾವಳಿ ಜಿಲ್ಲೆಗಳನ್ನೇ ಮುಖ್ಯವಾಗಿಟ್ಟುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. 

ಮೂಲಗಳ ಪ್ರಕಾರ ಈಗಾಗಲೇ ಆರೋಪಿಯ ಸುಳಿವು ಪತ್ತೆಹಚ್ಚುವಲ್ಲಿ ತನಿಖಾ ತಂಡ ಬಹುತೇಕ ಯಶಸ್ವಿಯಾಗಿದ್ದು, ಈ ಮಧ್ಯೆ, ಶಂಕೆಯ ಮೇರೆಗೆ ಉಡುಪಿ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. 

ಈತ ಎರಡು ವರ್ಷಗಳ ಹಿಂದೆ ಬೆಂಗಳೂರು ಅಂತರಾಷ್ಟ್ರೀ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿ ಶಿಕ್ಷೆ ಅನುಭವಿಸಿದ್ದ ಎಂದು ತಿಳಿದುಬಂದಿದೆ. 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಸ್ಫೋಟಕ ತುಂಬಿದ್ದ ಚೀಲ ಇರಿಸಿಹೋದ ದುಷ್ಕರ್ಮಿ ಪತ್ತೆಗೆ ಪೊಲೀಸರು ಮೂರು ತಂಡಗಳಲ್ಲಿ ಪತ್ತೆ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈಗಾಗಲೇ ಶಂಕಿತ ದುಷ್ಕರ್ಮಿ ಭಾವಚಿತ್ರವನ್ನು ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯದ ಆಧಾರದಲ್ಲಿ ಬಿಡುಗಡೆಗೊಳಿಸಿದ್ದಾರೆ. ದುಷ್ಕರ್ಮಿ ಸಂಚರಿಸಿದ್ದ ಆಟೋರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಆಟೋ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com