'ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ನಾನೇ': ಬೆಂಗಳೂರು ಪೊಲೀಸರಿಗೆ ಬಾಂಬರ್ ಶರಣು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ.
ಬಂಧಿತ ಆರೋಪಿ ಆದಿತ್ಯಾ ರಾವ್
ಬಂಧಿತ ಆರೋಪಿ ಆದಿತ್ಯಾ ರಾವ್
Updated on

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ.

ಹೌದು..ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಶಂಕಿತ ಆರೋಪಿ ಆದಿತ್ಯ ರಾವ್ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಜಿಪಿ ನೀಲಮಣಿರಾಜು ಅವರ ಎದುರು ಬುಧವಾರ ಬೆಳಿಗ್ಗೆ ಸುಮಾರು 8.40ರ ಸುಮಾರಿಗೆ ಶರಣಾಗಿದ್ದಾನೆ. 

ಪೊಲೀಸ್ ಮೂಲಗಳ ಪ್ರಕಾರ ಮಣಿಪಾಲ ಮೂಲದ ಆದಿತ್ಯ ರಾವ್ ಎಂಬಾತ ‘ಬಾಂಬ್ ಇಟ್ಟಿದ್ದು ನಾನೇ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ಕಚೇರಿಗೆ ಆಗಮಿಸಿ ಶರಣಾಗಿ ತನ್ಮ ತಪ್ಪೊಪ್ಪಿಕೊಂಡಿದ್ದಾನೆ  ಎನ್ನಲಾಗಿದೆ. ಪ್ರಸ್ತುತ ಆರೋಪಿಯನ್ನು ಹಲಸೂರುಗೇಟ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಠಾಣೆಯ ಇನ್‌ಸ್ಟೆಕ್ಟರ್ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

IED recovered from a bag at Mangaluru airport on 20th January: Suspect Aditya Rao has surrendered before Bangaluru police. Mangaluru police's investigation team is flying to Bengaluru to question him. #Karnataka pic.twitter.com/BTMnBbzhxJ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com