ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿದ ದಿನೇಶ್ ಗುಂಡೂರಾವ್

ತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಪಕ್ಷದ ಕೇಂದ್ರ ಕಚೇರಿ ಎದುರು ಬಹಿರಂಗವಾಗಿ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ.

Published: 22nd January 2020 08:57 AM  |   Last Updated: 22nd January 2020 08:57 AM   |  A+A-


Siddaramaih

ಸಿದ್ದರಾಮಯ್ಯ

Posted By : Shilpa D
Source : UNI

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಪಕ್ಷದ ಕೇಂದ್ರ ಕಚೇರಿ ಎದುರು ಬಹಿರಂಗವಾಗಿ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ.

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಮಂಜುನಾಥ, ಮಾಜಿ ಕಾರ್ಯದರ್ಶಿಗಳಾಗಿರುವ ಎ. ಕೆಂಚೇಗೌಡ ಹಾಗೂ ಎಂ.ಜಿ. ಬಲರಾಮ್ ಅವರನ್ನು ಎಐಸಿಸಿ ಸೂಚನೆ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಬಲರಾಮ್ ನೇತೃತ್ವದಲ್ಲಿ ಸೋಮವಾರ ಸಂಜೆ ಸಿದ್ದರಾಮಯ್ಯ ವಿರುದ್ಧ ದಿಢೀರ್ ಪ್ರತಿಭಟನೆ ನಡೆಸಿದ್ದರು.

 ಈ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿತ್ತಿ ಪತ್ರಗಳನ್ನು ಹಿಡಿದು, ಘೋಷಣೆಗಳನ್ನು ಕೂಗಿದ್ದರು.

ಎಐಸಿಸಿ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ಅಮಾನತುಗೊಂಡ ಮೂವರೂ ನಿರಂತರವಾಗಿ ಇತ್ತೀಚೆಗೆ ಕಾಂಗ್ರೆಸ್ ಹಾಗೂ ಅದರ ನಾಯಕರ ವಿರುದ್ಧ ಆರೋಪಗಳನ್ನು ಮಾಡಿ ಪಕ್ಷಕ್ಕೆ ಕಳಂಕ ತಂದಿದ್ದರು ಎಂದು ಗುಂಡೂರಾವ್ ತಿಳಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp