ಫ್ರೀ ಕಾಶ್ಮೀರ್ ಪ್ರಕರಣ: ನಳಿನಿ ಪರ ವಕಾಲತ್ತು ವಹಿಸದಿರುವುದು ಖಂಡನೀಯ- ಸಿದ್ದರಾಮಯ್ಯ

ಫ್ರೀ ಕಾಶ್ಮೀರ್ ನಾಮಫಲಕ ಪ್ರದರ್ಶಿಸಿದ್ದ ಪ್ರಕರಣದಲ್ಲಿ ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧರಿಸಿರುವುದು ಅಸಂವಿಧಾನಿಕ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಫ್ರೀ ಕಾಶ್ಮೀರ್ ನಾಮಫಲಕ ಪ್ರದರ್ಶಿಸಿದ್ದ ಪ್ರಕರಣದಲ್ಲಿ ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧರಿಸಿರುವುದು ಅಸಂವಿಧಾನಿಕ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ವಕೀಲರ ಸಂಘದ ನಿರ್ಧಾರ ಅಸಂವಿಧಾನಿಕ. ಆ ರೀತಿ ನಿರ್ಧಾರ ತೆಗೆದುಕೊಳ್ಳಲು  ವಕೀಲ ಸಂಘಕ್ಕೆ ಅವಕಾಶವೇ ಇಲ್ಲ. ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶಿಸಿದ್ದು ದೇಶದ್ರೋಹದ ಕೆಲಸವಲ್ಲ ಎಂದು ಹೇಳಿದ್ದಾರೆ. 

ಕಾಶ್ಮೀರದಲ್ಲಿ ಇಂದಿಗೂ ತುರ್ತು ಪರಿಸ್ಥಿತಿ ಇದೆ. ಅದರಿಂದ ಮುಕ್ತಗೊಳಿಸಬೇಕೆಂಬ ಭಾವನೆಯಿಂದ ನಳಿನಿ ನಾಮಫಲಕ ಪ್ರದರ್ಶಿಸಿದ್ದಾಳೆ. ಇದರ ವಿರುದ್ಧ ಮೈಸೂರು ವಕೀಲರ ಸಂಘ ವಕಾಲತ್ತು ಹಾಕದಂತೆ ನಿರ್ಣಯ ಕೈಗೊಂಡಿರುವುದು ಸರಿಯಲ್ಲ. ಇದನ್ನು ಪ್ರಶ್ನೆ ಮಾಡಿದ ಮಹಿಳಾ ಆಯೋಗದ ಮಾಜಿ ಅಧ್ಯಕ್ಷ ಮಂಜುಳಾ ಮಾನಸ ಮೇಲೆ ವಕೀಲರಿಂದ ಹಲ್ಲೆಗೆ ಯತ್ನ ನಡೆಸಿರುವುದು ಗೂಂಡಾಗಿರಿ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com