ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅಂಚೆ ಇಲಾಖೆಯಲ್ಲಿ 44 ಜೂನಿಯರ್ ಅಕೌಂಟೆಂಟ್ ಹುದ್ದೆಗಳಿಗೆ ರಾಜ್ಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44 ಜೂನಿಯರ್ ಅಕೌಂಟೆಂಟ್, ಶಾರ್ಟಿಂಗ್ ಅಕೌಂಟೆಂಟ್ ಮತ್ತು ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಕ್ರೀಡಾ ಕೋಟಾದಲ್ಲಿ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು: ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44 ಜೂನಿಯರ್ ಅಕೌಂಟೆಂಟ್, ಶಾರ್ಟಿಂಗ್ ಅಕೌಂಟೆಂಟ್ ಮತ್ತು ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಕ್ರೀಡಾ ಕೋಟಾದಲ್ಲಿ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ: ಜೂನಿಯರ್ ಅಕೌಂಟೆಂಟ್ ಹುದ್ದೆಗೆ ಯಾವುದೇ ಪದವಿ, ಹಾಗೂ ಪೋಸ್ಟ್ ಮ್ಯಾನ್ ಹುದ್ದೆಗೆ ಪಿಯುಸಿಯಲ್ಲಿ ಉತ್ತೀರ್ಣರಾಗಿದ್ದು, ಕರ್ನಾಟಕದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಕ್ರಿಕೆಟ್, ಕಬ್ಬಡ್ಡಿ, ವಾಲಿಬಾಲ್, ಬಾಸ್ಕೆಟ್‌ಬಾಲ್, ಖೋಖೋ ಸೇರಿದಂತೆ ಮುಂತಾದ ಕ್ರೀಡೆಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಶಾಲಾ ಮಟ್ಟದಲ್ಲಿ, ಅಂತರ ಕಾಲೇಜು, ವಿಶ್ವವಿದ್ಯಾಲಯದ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಪ್ರಥಮ ದ್ವಿತೀಯ ಸ್ಥಾನ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ: ಕನಿಷ್ಠ 18 ಮತ್ತು ಗರಿಷ್ಠ 27 ವರ್ಷ ನಿಗದಿಪಡಿಸಿದ್ದು, ಒಬಿಸಿಗೆ 3  ವರ್ಷ, ಎಸ್ ಸಿ/ ಎಸ್ ಟಿಗಳಗೆ 5 ವರ್ಷ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 8861593995 ಸಂಖ್ಯೆ ಕರೆ ಮಾಡಲು ಕೋರಿದೆ.

Related Stories

No stories found.

Advertisement

X
Kannada Prabha
www.kannadaprabha.com