ಮಂಗಳೂರು ಬಾಂಬರ್ ಮಾನಸಿಕ ಅಸ್ವಸ್ಥನೇ, ಅಲ್ಲವೇ ಎಂಬುದನ್ನು ವೈದ್ಯರೇ ಸ್ಪಷ್ಟಪಡಿಸಬೇಕು: ಜಾರಕಿಹೊಳಿ

ತನಿಖೆಗೂ ಮುನ್ನವೇ ಮಂಗಳೂರು ಬಾಂಬರ್ ಆದಿತ್ಯರಾವ್ ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ತನಿಖೆಗೂ ಮುನ್ನವೇ ಮಂಗಳೂರು ಬಾಂಬರ್ ಆದಿತ್ಯರಾವ್ ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಈ ಕುರಿತು ಮಾತನಾಡಿರುವ ಅವರು, ಸ್ಪಷ್ಟ  ಮಾಹಿತಿಗಳಿಲ್ಲದೆಯೇ ಬಾಂಬರ್ ನನ್ನು ಮಾನಸಿಕ ಅಸ್ವಸ್ಥ ಎಂದು ಸಚಿವರು ಹೇಳಿರುವುದು ಸರಿಯಲ್ಲ. ಘಟನೆ ಸಂಭವಿಸಿದಾಗ ಹಲವರು ಸಾಕಷ್ಟು ಹೇಳಿಕೆಗಳನ್ನು ನೀಡಿದ್ದರು, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂದು ಹೇಳಲು ಆರಂಭಿಸಿದ್ದರು. ಇದೀಗ ವ್ಯಕ್ತಿ ಯಾವ ಸಮುದಾಯಕ್ಕೆ ಸೇರಿದವನು ಎಂಬುದು ಸ್ಪಷ್ಟವಾಗುತ್ತಿದ್ದಂತೆಯೇ ಹೊಸ ರೀತಿಯ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆಂದು ಹೇಳಿದ್ದಾರೆ. 

ಒಬ್ಬ ಕ್ರಿಮಿನಲ್ ವ್ಯಕ್ತಿ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವ್ಯಕ್ತಿಯನ್ನು ಸರ್ಕಾರ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದ ವ್ಯಕ್ತಿಯನ್ನು ರಾಷ್ಟ್ರ ವಿರೋಧಿ ಎಂದೇ ಪರಿಗಣಿಸಬೇಕು ಎಂದು ತಿಳಿಸಿದ್ದಾರೆ. 

ತನಿಖೆಗೂ ಮುನ್ನವೇ ಆರೋಪಿಯನ್ನು ಮಾನಸಿಕ ಅಸ್ವಸ್ಥ ಎಂದು ಕರೆಯುವುದು ನ್ಯಾಯಯುತವಲ್ಲ. ತನಿಖಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಯಬೇಕು. ಆರೋಪಿಯನ್ನು ಮಾನಸಿಕ ಅಸ್ವಸ್ಥ ಎಂದು ಘೋಷಿಸುವ ಹಕ್ಕು ವೈದ್ಯರಿಗಷ್ಟೇ ಇದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com