ಅಕ್ರಮ ವಾಸ: ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಮಹಿಳೆ ಬಂಧನ

ಮಾರತ್ತಹಳ್ಳಿ ಠಾಣೆ ಪೊಲೀಸರು ಶುಕ್ರವಾರ ಮಹಿಳೆ ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಾಡುಬೀಸನಹಳ್ಳಿ ಸಮೀಪ ಅಕ್ರಮವಾಗಿ ವಾಸವಿದ್ದ ಬಾಂಗ್ಲಾ ದೇಶದ ನರ್ಗೀಸ್ ಬೇಗಂ (45) ಬಂಧಿತ ಮಹಿಳೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು:  ಮಾರತ್ತಹಳ್ಳಿ ಠಾಣೆ ಪೊಲೀಸರು ಶುಕ್ರವಾರ ಮಹಿಳೆ ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. 

ಕಾಡುಬೀಸನಹಳ್ಳಿ ಸಮೀಪ ಅಕ್ರಮವಾಗಿ ವಾಸವಿದ್ದ ಬಾಂಗ್ಲಾ ದೇಶದ ನರ್ಗೀಸ್ ಬೇಗಂ (45) ಬಂಧಿತ ಮಹಿಳೆ.

‘ಬಾಂಗ್ಲಾದೇಶದ ಬಾಗೇರ್‌ಹಟ್ ಜಿಲ್ಲೆಯ ನರ್ಗೀಸ್ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಠಾಣೆ ವ್ಯಾಪ್ತಿಯ ಖಾಲಿ ಜಾಗದಲ್ಲಿ ನಿರ್ಮಿಸಿದ್ದ ಜೋಪಡಿಯೊಂದರಲ್ಲಿ ಉಳಿದುಕೊಂಡಿದ್ದರು. 

ಸ್ಥಳೀಯರೊಬ್ಬರು ನೀಡಿದ ಮಾಹಿತಿಯಂತೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದಾಗ ಸಿಕ್ಕಿಬಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ತಾನು ಬಾಂಗ್ಲಾದೇಶದ ಪ್ರಜೆ ಎಂಬುದನ್ನು ಒಪ್ಪಿಕೊಂಡಿರುವ ನರ್ಗೀಸ್, ಅಕ್ರಮವಾಗಿ ಗಡಿ ದಾಟಿ ರೈಲಿನ ಮೂಲಕ ಬೆಂಗಳೂರಿಗೆ ಬಂದಿ ರುವುದಾಗಿ ಹೇಳಿಕೆ ನೀಡಿದ್ದಾಳೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com