ನಿತ್ಯಾನಂದನಿಗೆ 'ಹೈ' ಸಂಕಷ್ಟ; ಜಾಮೀನು ರದ್ಧತಿ ಅರ್ಜಿ ಕುರಿತು ಸಮನ್ಸ್ ಜಾರಿ!

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜಾಮೀನು ರದ್ಧತಿ ಅರ್ಜಿ ಕುರಿತಂತೆ ಹೈಕೋರ್ಟ್ ಸಮನ್ಸ್ ನೀಡಿದೆ.
ನಿತ್ಯಾನಂದ ಮತ್ತು ಹೈಕೋರ್ಟ್
ನಿತ್ಯಾನಂದ ಮತ್ತು ಹೈಕೋರ್ಟ್

ಬೆಂಗಳೂರು: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜಾಮೀನು ರದ್ಧತಿ ಅರ್ಜಿ ಕುರಿತಂತೆ ಹೈಕೋರ್ಟ್ ಸಮನ್ಸ್ ನೀಡಿದೆ.

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಿತ್ಯಾನಂದ ಕಳೆದ ಒಂದೂವರೆ ವರ್ಷದಿಂದ ನಾಪತ್ತೆಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ದೂರುದಾರ ಲೆನಿನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನಿತ್ಯಾನಂದ ಸ್ವಾಮಿ ಜಾಮೀನು ರದ್ದತಿ ಕೋರಿ ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ಸಮನ್ಸ್ ಜಾರಿ ಮಾಡಿದೆ.  

ಇನ್ನು ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನಿತ್ಯಾನಂದನಿಗೆ ಎಷ್ಟು ಬಾರಿ ಸಮನ್ಸ್ ನೀಡಲಾಗಿದೆ. ಎಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ ಎಂಬ ಪ್ರಶ್ನೆ ಹಾಕಿತ್ತು. ಇದಕ್ಕೆ ಉತ್ತರಿಸಿದ ಲೆನಿನ್ ಪರ ವಕೀಲರು, ನಿತ್ಯಾನಂದನಿಗೆ 45 ಬಾರಿ ಸಮನ್ಸ್ ನೀಡಲಾಗಿದ್ದು, 45 ಬಾರಿ ವಿಚಾರಣೆಗೆ ನಿತ್ಯಾನಂದ ಗೈರು ಹಾಜರಾಗಿದ್ದಾರೆ. ನಿತ್ಯಾನಂದ ಭಾರತದಿಂದ ಪರಾರಿಯಾಗಿ ಒಂದೂವರೆ ವರ್ಷ ಕಳೆದಿದೆ ಎಂದು ಮಾಹಿತಿ ನೀಡಿದರು.

ಇದೇ ಕಾರಣಕ್ಕೆ ನಿತ್ಯಾನಂದನಿಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್, ರಾಜ್ಯ ಸರ್ಕಾರ, ಸಿಐಡಿಗೂ ನೋಟಿಸ್ ಜಾರಿ ಮಾಡಿದೆ. ನಿತ್ಯಾನಂದನ ಪ್ರಕರಣ ಬಗ್ಗೆ ಉತ್ತರ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com