ಧಾರವಾಡದಲ್ಲಿ ಭೀಕರ ಅಪಘಾತ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರ ದುರ್ಮರಣ

ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

Published: 26th January 2020 04:29 PM  |   Last Updated: 26th January 2020 04:29 PM   |  A+A-


Accident

ಅಪಘಾತದ ದೃಶ್ಯ

Posted By : Vishwanath S
Source : Online Desk

ಧಾರವಾಡ: ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ 4ರ ಯರಿಕೊಪ್ಪ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬಸವೇಶ್ವರ ಸ್ವಾಮೀಜಿ ಮತ್ತು ಕಾರು ಚಾಲಕ ಮೃತಪಟ್ಟಿದ್ದರೆ ಮತ್ತೊಂದು ಕಾರಿನಲ್ಲಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ. 

ಅಪಘಾತದಲ್ಲಿ ಬಸಪ್ಪ ಪೂಜಾರ, ಸಿದ್ದಪ್ಪ ಇಂಗಳಳ್ಳಿ, ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಸಂಬಂಧಿ ಸೋಮಣ್ಣ ದೇಸಾಯಿ ಗಾಯಗೊಂಡಿದ್ದಾರೆ. ಅವರೆಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp