ಹಾವೇರಿ: ರಸ್ತೆ ಅಪಘಾತ, ಸಿದ್ದಾರೂಢ ಮಠದ ಶಂಕರಾನಂದ ಸ್ವಾಮೀಜಿ ಪಾರು

ಹಾನಗಲ್ ತಾಲೂಕಿನ ಹೋತನಹಳ್ಳಿ ಸಿದ್ದಾರೂಢ ಮಠದ ಶಂಕರಾನಂದ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಹಾನಗಲ್ ಕೋರ್ಟ್ ಕ್ರಾಸ್ ಬಳಿ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ.

Published: 26th January 2020 03:57 PM  |   Last Updated: 26th January 2020 03:57 PM   |  A+A-


ಹಾವೇರಿ: ರಸ್ತೆ ಅಪಘಾತ, ಸಿದ್ದಾರೂಢ ಮಠದ ಶಂಕರಾನಂದ ಸ್ವಾಮೀಜಿ ಪಾರು

Posted By : Raghavendra Adiga
Source : UNI

ಹಾವೇರಿ:  ಹಾನಗಲ್ ತಾಲೂಕಿನ ಹೋತನಹಳ್ಳಿ ಸಿದ್ದಾರೂಢ ಮಠದ ಶಂಕರಾನಂದ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಹಾನಗಲ್ ಕೋರ್ಟ್ ಕ್ರಾಸ್ ಬಳಿ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಸಿಮೆಂಟ್ ರಿಂಗ್‍ಗಳಿಗೆ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಕಾರು ಚಾಲಕ ಮತ್ತು ಶಂಕರಾನಂದ ಸ್ವಾಮೀಜಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ‌ ಎಂದು ತಿಳಿದು ಬಂದಿದೆ.

ತಕ್ಷಣವೇ ಸ್ಥಳೀಯರು ಸ್ವಾಮೀಜಿ ಹಾಗೂ ಚಾಲಕನ ಸಹಾಯಕ್ಕೆ ಧಾವಿಸಿದ್ದಾರೆ. ಇದೀಗ ಸ್ವಾಮೀಜಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಹೊಂದಿ ಮಠಕ್ಕೆ ಮರಳಿದ್ದಾರೆ.ಹಾನಗಲ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

Stay up to date on all the latest ರಾಜ್ಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp