ರೌಡಿ‌ ಸುಕೇಸ್ ವಿರುದ್ಧ ಗೂಂಡಾ ಕಾಯ್ದೆ ಜಾರಿ

ನಗರದ ಕುಮಾರಸ್ವಾಮಿ ಲೇಔಟ್ ನ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಸುಕೇಶ್ (25 ವರ್ಷ) ವಿರುದ್ಧ ಉಚ್ಛ ನ್ಯಾಯಾಲಯವು ಗೂಂಡಾ ಕಾಯ್ದೆ ಜಾರಿಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ಕುಮಾರಸ್ವಾಮಿ ಲೇಔಟ್ ನ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಸುಕೇಶ್ (25 ವರ್ಷ) ವಿರುದ್ಧ ಉಚ್ಛ ನ್ಯಾಯಾಲಯವು ಗೂಂಡಾ ಕಾಯ್ದೆ ಜಾರಿಗೊಳಿಸಿದೆ.

ರೌಡಿ ಸುಕೇಸ್ ವಿರುದ್ಧ ದೊಂಬಿ, ಕೊಲೆ‌ಯತ್ನ, ಮಾರಣಾಂತಿಕ‌ ಹಲ್ಲೆ, ಅಪಹರಣ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ‌ ಭಾಗಿಯಾಗಿದ್ದನು. ಈ ಹಿನ್ನೆಲೆಯಲ್ಲಿ ಈತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತ್ತಾದರೂ, ಜಾಮೀನಿನ ಮೇಲೆ ಹೊರಬಂದ ಈತ ಮತ್ತದೇ, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ.

ಈತನ ವಿರುದ್ಧ ಒಟ್ಟು 9 ವಿವಿಧ ಪ್ರಕರಣಗಳು ದಾಖಲಾಗಿದ್ದವು. ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಮೂಲಕ ಸಾರ್ವಜನಿಕರ ನೆಮ್ಮದಿಗೆ ಭಂಗತರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ರೋಹಿಣಿ ಕಟೋಚ್ ಸೆಪಟ್ ಅವರು ಆತನ ವಿರುದ್ಧ ಎಲ್ಲಾ ಪ್ರಕರಣದ ದಾಖಲಾತಿಗಳನ್ನು ಕ್ರೋಢಿಕರಿಸಿ ಉಚ್ಛ ನ್ಯಾಯಾಲಯದ ಸಲಹಾ‌ ಮಂಡಳಿ ಎದುರು ತಮ್ಮ ವಾದ ಮಂಡಿಸಿದ್ದರು.

ಇಷ್ಟಕ್ಕೂ ಏನಿದು ಗೂಂಡಾ ಕಾಯ್ದೆ?
1985ರಲ್ಲಿ ಆಗಿನ ಜನತಾ ಪಕ್ಷದ ಸರ್ಕಾರ ಗೂಂಡಾ ಚಟುವಟಿಕೆ ನಿಯಂತ್ರಿಸಲು ಈ ಕಾಯ್ದೆಯನ್ನು ಜಾರಿಗೆ ತಂದಿತ್ತು. ಜೂಜುಕೋರರು, ಕಳ್ಳ ಬಟ್ಟಿ ವ್ಯಾಪಾರಿಗಳು, ಮಾದಕ ವಸ್ತು ಸಾಗಾಣಿಕೆ ಮತ್ತು ಮಾರಾಟಗಾರರ ವಿರುದ್ಧ ಈ ಕಾಯ್ದೆಯ ಮೂಲಕ ಕ್ರಮಕೈಗೊಳ್ಳಬಹುದಾಗಿತ್ತು. ಈ ಕಾಯ್ದೆಯಲ್ಲಿ ಬಂಧಿಸಲಾದ ವ್ಯಕ್ತಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯ ಇಲ್ಲ. ಪೊಲೀಸ್‌ ಕಸ್ಟಡಿ ಅಥವಾ ನ್ಯಾಯಾಂಗ ಬಂಧನವನ್ನು ಪದೇ ಪದೇ ವಿಸ್ತರಿಸಿಕೊಳ್ಳುವ ಪ್ರಕ್ರಿಯೆಯ ಅಗತ್ಯವೂ ಇಲ್ಲದೇ ನೇರವಾಗಿ ಜೈಲಿಗೆ ಕಳುಹಿಸಬಹುದು. ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿತನಾದಲ್ಲಿ ಅಪರಾಧಿಗೆ ಒಂದು ವರ್ಷ ಜಾಮೀನು ಸಿಗುವುದಿಲ್ಲ.


ಗೂಂಡಾ ತಡೆ ಕಾಯ್ದೆಯನ್ನು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಪೊಲೀಸ್‌ ಆಯುಕ್ತರಿಗೆ ಮ್ಯಾಜಿಸ್ಟೀರಿಯಲ್‌ ಅಧಿಕಾರವಿರುತ್ತದೆ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಅಥವಾ ಪೊಲೀಸ್‌ ಆಯುಕ್ತರಿಗೆ ಈ ಅಧಿಕಾರವಿದೆ. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಚಟುವಟಿಕೆಗಳ ಬಗ್ಗೆ ಕೆಳಹಂತದ ಪೊಲೀಸ್‌ ಅಧಿಕಾರಿಗಳು ನೀಡುವ ವರದಿಯನ್ನು ಪರಿಶೀಲಿಸಿ ಪೊಲೀಸ್‌ ಆಯುಕ್ತರು ಅಥವಾ ಜಿಲ್ಲಾಧಿಕಾರಿ ಕಾಯ್ದೆಯನ್ನು ಜಾರಿಗೊಳಿಸುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com