ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ಯಾವ ಕಾನೂನಿನಡಿ ತಡೆ ನೀಡಲಾಗಿದೆ: ಬಿಎಸ್ ವೈ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ತಡೆ ನೀಡುವ ಅಧಿಕಾರ ಮುಖ್ಯಮಂತ್ರಿಗೆ ಇದೆಯೇ? ಯಾವ ಕಾನೂನಿನಡಿ ಕಾಮಗಾರಿಗಳಿಗೆ ತಡೆ ನೀಡಲಾಗಿದೆ ಎಂದು ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ತಡೆ ನೀಡುವ ಅಧಿಕಾರ ಮುಖ್ಯಮಂತ್ರಿಗೆ ಇದೆಯೇ? ಯಾವ ಕಾನೂನಿನಡಿ ಕಾಮಗಾರಿಗಳಿಗೆ ತಡೆ ನೀಡಲಾಗಿದೆ ಎಂದು ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

ಮುಖ್ಯಮಂತ್ರಿಗಳ ನಮ್ಮ ಬೆಂಗಳೂರು ಯೋಜನೆ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಸ್ಥಗಿತಕ್ಕೆ ಹೊರಡಿಸಿರುವ ಆದೇಶದ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ದಾಸರಹಳ್ಳಿ–ರಾಚೇನಹಳ್ಳಿ ಕೆರೆ ಅಭಿವೃದ್ಧಿ ಮತ್ತು ಸಂರಕ್ಷಣೆ ಟ್ರಸ್ಟ್‌ ಅಧ್ಯಕ್ಷ ಕೆ.ನವೀನ್‌ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ನೇತೃತ್ವದ ಪೀಠ ಈ ಆದೇಶ ನೀಡಿದೆ.

ರಾಜ್ಯ ಸರ್ಕಾರ 2019ರ ಫೆಬ್ರುವರಿ 1ರಂದು ಕಾಮಗಾರಿಗಳಿಗೆ ಆದೇಶ ಹೊರಡಿಸಿತ್ತು. ಆದರೆ, ಅದನ್ನು ಸ್ಥಗಿತಗೊಳಿಸಿರುವುದರಿಂದ ಯೋಜನಾ ವೆಚ್ಚ ಏರಿಕೆಯಾಗಿ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುತ್ತದೆ. ಮಳೆಗಾಲದಲ್ಲಿ ಇನ್ನಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಕಾಮಗಾರಿ ಮುಂದುವರಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.

ಹಿಂದಿನ ಮೈತ್ರಿ ಸರಕಾರದ ಅವಧಿಯಲ್ಲಿ ಘೋಷಿಸಲಾಗಿದ್ದ ಕಾಮಗಾರಿಗಳಿಗೆ ಹಾಲಿ ಮುಖ್ಯಮಂತ್ರಿ ತಡೆ ನೀಡಿದ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ನೇತೃತ್ವದ ನ್ಯಾಯಪೀಠ, ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಘೋಷಿಲಾಗಿದ್ದ ಕಾಮಗಾರಿಗಳಿಗೆ ತಡೆ ನೀಡಲು ಸಿಎಂಗೆ ಅಧಿಕಾರವಿದೆಯೇ? ಎಂದು ಪ್ರಶ್ನಿಸಿದೆ.

ಯಾವ ಕಾನೂನಿನಡಿ ಸಿಎಂ ಕಾಮಗಾರಿಗೆ ತಡೆ ನೀಡಿದ್ದಾರೆ? ಸಿಎಂ ಟಿಪ್ಪಣಿ ಆಧರಿಸಿ ಕಾಮಗಾರಿ ತಡೆ ಹಿಡಿಯಬಹುದೇ? ಎಂದು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ.

ಕಾಮಗಾರಿ ವಿಳಂಬದಿಂದಾಗುವ ನಷ್ಟಕ್ಕೆ ಹೊಣೆ ಯಾರು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com