ಪ್ರಧಾನಿ ಮೋದಿ ಅವಮಾನಿಸಿ ಮಕ್ಕಳಿಂದ ನಾಟಕ ಪ್ರದರ್ಶನ: ಬೀದರ್ ಶಾಲೆ ವಿರುದ್ಧ ಪ್ರಕರಣ ದಾಖಲು

ಬೀದರ್ ನಗರದ ಪ್ರತಿಷ್ಠಿತ ಶಾಲೆಯೊಂದರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಕ್ಕಳಿಂದ ನಾಟಕ ಪ್ರದರ್ಶಿಸಲಾಗಿದ್ದು, ನಾಟಕದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅವಮಾನಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೀದರ್: ಬೀದರ್ ನಗರದ ಪ್ರತಿಷ್ಠಿತ ಶಾಲೆಯೊಂದರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಕ್ಕಳಿಂದ ನಾಟಕ ಪ್ರದರ್ಶಿಸಲಾಗಿದ್ದು, ನಾಟಕದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅವಮಾನಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 

ನಾಟಕದಲ್ಲಿ ಪ್ರಧಾನಿ ಮೋದಿಯವರನ್ನು ಅವಮಾನಿಸಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ನೀಲೇಶ್ ರಕ್ಷ್ಯಾಲ್ ಅವರು ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ನಾಟಕದಲ್ಲಿ ಪೌರತ್ವ ಕಾಯ್ದೆಯಿಂದ ಒಂದು ಸಮುದಾಯ ದೇಶವನ್ನು ಬೇಕು ಎಂಬ ಸಂದೇಶವನ್ನು ತಿಳಿಸಲಾಗಿದೆ. ಈ ನಾಟಕದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದ್ದು, ವಿಡಿಯೋ ವೈರಲ್ ಆಗಿದೆ. 

ನಾಟಕದಿಂದ ಸಮಾಜ ಶಾಂತಿಗೆ ದಕ್ಕೆಯುಂಟು ಮಾಡಿದಂತಾಗಿದೆ. ಅಲ್ಲದೆ, ಸರ್ಕಾರದ ನೀತಿ ಹಾಗೂ ನಿರ್ಧಾರಗಳ ವಿರುದ್ಧ ತಪ್ಪು ಸಂದೇಶವನ್ನು ರವಾನಿಸದಂತಾಗುತ್ತದೆ ಎಂದು ದೂರಿನಲ್ಲಿ ನೀಲೇಶ್ ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com