ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಿಂದ 82 ಕೋಟಿ ರೂ. ನಷ್ಟ; ಸರ್ಕಾರ

ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ ವೇಳೆ ನಡೆದ ಪ್ರತಿಭಟನೆಗಳಿಂದ ಸುಮಾರು 82 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು:  ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ ವೇಳೆ ನಡೆದ ಪ್ರತಿಭಟನೆಗಳಿಂದ ಸುಮಾರು 82 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ಕನಕಪುರ ತಾಲ್ಲೂಕಿನ ರವಿಕುಮಾರ್ ಕೆಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್‌.ಓಕಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಅವರು ಪ್ರಕರಣದ ಪ್ರಗತಿ ವರದಿ ಸಲ್ಲಿಸಿದರು.

ಶಿವಕುಮಾರ್ ಅವರ ಬಂಧನ ವಿರೋಧಿಸಿ 2019ರ ಸೆಪ್ಟೆಂಬರ್‌ 4ರಿಂದ 11ರವರೆಗೆ ರಾಮನಗರ ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು ನಡೆದಿತ್ತು. 

ಪ್ರತಿಭಟನೆಗಳಲ್ಲಿ 82 ಕೋಟಿ ರೂ.ನಷ್ಟವಾಗಿದೆ. ಈ ಸಂಬಂಧ 40 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com