1 ಸಾವಿರಕ್ಕೂ ಹೆಚ್ಚು ಇಂಗ್ಲೀಷ್ ಮಾಧ್ಯಮ ಶಾಲೆಗಳ ಆರಂಭಕ್ಕೆ ಸರ್ಕಾರ ಚಿಂತನೆ

ಅಸ್ತಿತ್ವದಲ್ಲಿರುವ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಇನ್ನೂ 1,000 ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಸಮಗ್ರ ಶಿಕ್ಷಣ ಅಭಿಯಾನದಿಂದ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ.

Published: 30th January 2020 08:38 AM  |   Last Updated: 30th January 2020 08:43 AM   |  A+A-


Casual_photo1

ಸಾಂದರ್ಭಿಕ ಚಿತ್ರ

Posted By : Nagaraja AB
Source : The New Indian Express

ಬೆಂಗಳೂರು: ಅಸ್ತಿತ್ವದಲ್ಲಿರುವ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಇನ್ನೂ 1,000 ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಸಮಗ್ರ ಶಿಕ್ಷಣ ಅಭಿಯಾನದಿಂದ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ.

ಸರ್ಕಾರ ಕಳೆದ ವರ್ಷ 1 ನೇ ತರಗತಿ ವಿದ್ಯಾರ್ಥಿಗಳಿಗೆ 1,000 ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮವನ್ನು ಪ್ರಾರಂಭಿಸಿ, ದ್ವಿಭಾಷೆಯ ಶಾಲೆಗಳನ್ನಾಗಿ ಮಾಡಿತ್ತು. 

ಆದರೆ, ಕನ್ನಡ ಪರ ಕಾರ್ಯಕರ್ತರ ವಿರೋಧದಿಂದಾಗಿ, ಈ ಪ್ರಸ್ತಾಪವನ್ನು ಅಂಗೀಕರಿಸಲಾಗುತ್ತದೆಯೇ ಎಂಬುದು ಅಧಿಕಾರಿಗಳಿಗೆ ಖಚಿತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಮೇ ತಿಂಗಳ ಮಧ್ಯದಲ್ಲಿ ಬಂದ ಸರ್ಕಾರದ ಆದೇಶದ ಪ್ರಕಾರ ಶಾಲೆಗಳನ್ನು ಆಯ್ಕೆ ಮಾಡಲು, ಮಕ್ಕಳ ಪೋಷಕರಿಗೆ ಸಲಹೆ ಹಾಗೂ ಶಿಕ್ಷಕರಿಗೆ ತರಬೇತಿ ನೀಡಲು ಸ್ವಲ್ಪ ಸಮಯವನ್ನು ನೀಡಲಾಗಿತ್ತು. ಸುಮಾರು 200 ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ನಿಗದಿಪಡಿಸಿದ 30 ವಿದ್ಯಾರ್ಥಿಗಳಿಗಿಂತ ಕಡಿಮೆ ಸಂಖ್ಯೆಯಲ್ಲಿತ್ತು.

ಪ್ರಸ್ತುತ 1 ತರಗತಿಗೆ ತರಬೇತಿ ನೀಡುತ್ತಿರುವ ಇಂಗ್ಲೀಷ್ ಮಾಧ್ಯಮದ ಶಿಕ್ಷಕರೇ 2 ನೇ ತರಗತಿಯ ವಿದ್ಯಾರ್ಥಿಗಳಿಗೂ ತರಬೇತಿ ನೀಡಲಿದ್ದಾರೆ. ಮುಂದಿನ ಬ್ಯಾಚ್ -1 ನೇ ತರಗತಿ  ವಿದ್ಯಾರ್ಥಿಗಳಿಗೆ ಆರು ಅಸ್ತಿತ್ವದಲ್ಲಿರುವ ಕನ್ನಡ ಮಾಧ್ಯಮ ಶಿಕ್ಷಕರು ಆರು ದಿನಗಳ ಕಾಲ ತರಬೇತಿ ನೀಡುವಂತೆ ಯೋಚಿಸಲಾಗುತ್ತಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

ಇಂಗ್ಲೀಷ್ ಮಾಧ್ಯಮ ಆರಂಭದ ಪ್ರಸ್ತಾವನೆ ಬಗ್ಗೆ ಚರ್ಚೆ ನಡೆಯುತ್ತಿದೆ. ಇನ್ನೂ ಯಾವುದೇ ನಿರ್ಧಾರವಾಗಿಲ್ಲ, 2020-21ರ ಶೈಕ್ಷಣಿಕ ವರ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರದಂತೆ  ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪರೀಕ್ಷೆಗೆ ಸಂಬಂಧಿಸಿದಂತೆ  ಬರೆದಿರುವ ಕನ್ನಡಕ್ಕೆ ಭಾಷಾಂತರಿಸಿದ ಬುಕ್ ಗಳುಗಳನ್ನು ಖರೀದಿಸುವಂತೆ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಎಲ್ಲಾ ಪ್ರೌಢ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಶಾಲಾ ಅಭಿವೃದ್ಧಿ ನಿಧಿಯಲ್ಲಿ ಈ ಪುಸ್ತಕಗಳನ್ನು ಖರೀದಿಸಬೇಕು. ಇದರಿಂದ ಹೇಗೆ ಪರೀಕ್ಷೆಗಳನ್ನು ಎದುರಿಸಬೇಕೆಂಬುದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ದೊರೆಯಲಿದೆ ಎಂದು ಅವರು ಸಲಹೆ ನೀಡಿದ್ದಾರೆ. 

ಈ ಮಧ್ಯೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ 2020ನೇ ಸಾಲಿನ  ದ್ವೀತಿಯ ಪಿಯುಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕರಿಸುವುದಾಗಿ ರಾಜ್ಯ ಪದವಿ ಪೂರ್ವ ಉಪನ್ಯಾಸಕರ ಸಂಘ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
 

Stay up to date on all the latest ರಾಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp